ಕೋವಿಡ್ ಅಲೆ : ಜಪಾನ್ ನ ಟೋಕಿಯೊದಲ್ಲಿ ತುರ್ತು ಪರಿಸ್ಥಿತಿ ಘೋಷಣೆ
ಟೋಕಿಯೋ : ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್ , ಕ್ವಾರಂಟೈನ್ ನಿಂದಾಗಿ ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ…
ಈ ನಡುವೆ ಒಲಿಂಪಿಕ್ಸ್ ಆರಂಭಕ್ಕೆ ಎರಡೇ ವಾರಗಳು ಉಳಿದಿರುವಂತೆ ಜಪಾನ್ ಸರ್ಕಾರ ಟೋಕಿಯೊದಲ್ಲಿ ಗುರುವಾರ ಹೊಸದಾಗಿ ತುರ್ತು ಪರಿಸ್ಥಿತಿ ಹೇರಿದೆ. ಕ್ರೀಡೆಗಳ ವೇಳೆಯೂ ನಿರ್ಬಂಧ ಕ್ರಮಗಳು ಮುಂದುವರಿಯಲಿದೆ. ಸಂಘಟಕರು ಕ್ರೀಡೆಗಳ ಎಲ್ಲ ಸ್ಪರ್ಧೆಗಳಿಗೆ ಪ್ರೇಕ್ಷಕರನ್ನು ದೂರವಿಡಬಹುದು ಎಂದು ಮೂಲಗಳು ತಿಳಿಸಿವೆ. ಜುಲೈ 23ರಂದು ಟೋಕಿಯೊ ಒಲಿಂಪಿಕ್ ಕ್ರೀಡೆಗಳ ಉದ್ಘಾಟನಾ ಸಮಾರಂಭ ನಿಗದಿಯಾಗಿದೆ. ಆದರೆ ರಾಜಧಾನಿಯಲ್ಲಿ ಸೋಂಕು ಪ್ರಕರಣಗಳು ಏರುತ್ತಿವೆ. ಅದರಲ್ಲೂ ಅಪಾಯಕಾರಿಯಾಗಿರುವ ಡೆಲ್ಟಾ ರೂಪಾಂತರ ಸೋಂಕು ಹರಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಹೊಸ ನಿರ್ಬಂಧಗಳು ಆಗಸ್ಟ್ 22 ರವರೆಗೆ ಜಾರಿಯಲ್ಲಿರಲಿದೆ ಎಂದು ಜಪಾನ್ ಪ್ರಧಾನಿ ಯೊಶಿಹಿಡೆ ಸುಗಾ ತಿಳಿಸಿದ್ದಾರೆ. ಆದರೆ ಇದು ವಿಶ್ವದ ಇತರ ಹಲವು ಕಡೆ ಹೇರಿದ್ದ ಬಿಗು ಕ್ರಮಗಳಿಗಿಂತ ಸ್ವಲ್ಪ ಸಡಿಲವಾಗಿರಲಿದೆ. ಲಸಿಕೆ ಪರಿಣಾಮಗಳು ಕಂಡುಬಂದಲ್ಲಿ ಮತ್ತು ಆಸ್ಪತ್ರೆಯಲ್ಲಿ ಹಾಸಿಗೆಯ ಸಮಸ್ಯೆ ಸುಧಾರಣೆ ಆದರಲ್ಲಿ ಸರ್ಕಾರ ನಿಗದಿಗಿಂತ ಬೇಗ ತುರ್ತುಸ್ಥಿತಿ ಹಿಂಪಡೆಯಲೂಬಹುದು ಎಂದು ಹೇಳಿದ್ದಾರೆ. ಇನ್ನೂ ಜನರ ಓಡಾಟ ಹೆಚ್ಚುತ್ತಿರುವಂತೆ ಪ್ರಕರಣಗಳು ಏರುತ್ತಿದೆ. ವರದಿಯಾಗುವ ಪ್ರಕರಣಗಳಲ್ಲಿ ಶೇ 30ರಷ್ಟು ಬಹುಬೇಗ ಹರಡುವ ಡೆಲ್ಟಾ ರೂಪಾಂತರ ವೈರಸ್ ಪತ್ತೆಯಾಗುತ್ತಿದೆ. ಇದು ಇನ್ನಷ್ಟು ಹೆಚ್ಚಾಗುವ ನಿರೀಕ್ಷೆ ಇದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ಹೊಸ ನಿರ್ಬಂಧಗಳ ಪ್ರಕಾರ ಬಾರ್ ಮತ್ತು ರೆಸ್ಟೊರೆಂಟ್ಗಳಲ್ಲಿ ಮದ್ಯಪಾನ ನಿಷೇಧಿಸಲಾಗಿದೆ. ರಾತ್ರಿ 8 ಗಂಟೆಯೊಳಗೆ ಬಾರ್ಗಳನ್ನು ಬಂದ್ ಮಾಡಬೇಕಾಗುತ್ತದೆ. ಸಂಗೀತ ಕಛೇರಿ, ಸಭೆ, ಸಮ್ಮೇಳನಗಳು 9 ಗಂಟೆ ನಂತರ ನಡೆಯುವಂತಿಲ್ಲ. ಜಪಾನ್ ನಲ್ಲಿ ಇದುವರೆಗೆ 14,900 ಮಂದಿ ಕೋವಿಡ್ನಿಂದ ಮೃತಪಟ್ಟಿದ್ದಾರೆ. ದೇಶದಲ್ಲಿ ಕೇವಲ ಶೇ 15ರಷ್ಟು ಜನರು ಮಾತ್ರ ಲಸಿಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
ಕೊರೊನಾ ಹಾವಳಿಯಿಂದ ಇಡೀ ವಿಶ್ವಾದ್ಯಂತ ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..








