ಜಪಾನ್‌ ನಲ್ಲಿ ಮಣ್ಣು ಕುಸಿತ : ಇಬ್ಬರು ಸಾವು, 20ಕ್ಕೂ ಹೆಚ್ಚು ಮಂದಿ ನಾಪತ್ತೆ

1 min read

ಜಪಾನ್‌ ನಲ್ಲಿ ಮಣ್ಣು ಕುಸಿತ : ಇಬ್ಬರು ಸಾವು, 20ಕ್ಕೂ ಹೆಚ್ಚು ಮಂದಿ ನಾಪತ್ತೆ

ಟೋಕಿಯೋ : ಜಪಾನ್ ನ ಟೋಕಿಯೊದ ನೈರುತ್ಯ ಭಾಗದಲ್ಲಿನ ಅಟಾಮಿ ಪಟ್ಟಣದ ಇಜುಸ್‌ನಲ್ಲಿ ಭಾರಿ ಮಳೆಯಿಂದಾಗಿ ಮಣ್ಣು ಕುಸಿದಿದೆ.. ಈ ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. 20 ಮಂದಿ ನಾಪತ್ತೆಯಾಗಿದ್ದಾರೆ. 1,000ಕ್ಕೂ ಹೆಚ್ಚು ಸೈನಿಕರು, ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಶನಿವಾರ ಭಾರಿ ಮಳೆಯಿಂದಾಗಿ ಮಣ್ಣು ಕುಸಿತ ಸಂಭವಿಸಿದೆ. ಹಲವು ಮನೆಗಳು, ಕಾರುಗಳು ಹಾನಿಗೊಳಗಾಗಿವೆ ಎಂದು ವರದಿಯಾಗಿದೆ.

ಮಣ್ಣು ಕುಸಿತದಲ್ಲಿ ಸುಮಾರು 130 ಮನೆಗಳು ಹಾನಿಯಾಗಿವೆ. ಈವರೆಗೆ 19 ಮಂದಿಯನ್ನು ರಕ್ಷಿಸಲಾಗಿದೆ ಎಂದು ಜಪಾನ್‌ ಪ್ರಧಾನಿ ಯೋಶಿಹಿದೆ ಸುಗಾ ಮಾಹಿತಿ ನೀಡಿದ್ದಾರೆ.

ಇಂಡೋನೇಷ್ಯಾದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳ , ಲಸಿಕೆ ಪೂರೈಕೆಯಲ್ಲಿ ವ್ಯತ್ಯಯ , ಆಕ್ಸಿಜನ್ ಕೊರತೆಯಿಂದ ರೋಗಿಗಳ ಪರದಾಟ

ಮಣ್ಣು ಕುಸಿತದಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ. ಇಬ್ಬರಿಗೆ ಗಾಯಗಳಾಗಿವೆ. ಹಲವರು ನಾಪತ್ತೆಯಾಗಿದ್ದಾರೆ. ಇಲ್ಲಿ ಇನ್ನೂ ಭಾರಿ ಮಳೆ ಸುರಿಯುತ್ತಿದೆ. ಹಲವು ಭೂಕುಸಿತಗಳು ಸಂಭವಿಸುವ ಸಾಧ್ಯತೆಗಳಿವೆ ಎಂದು ಸುಗಾ ಹೇಳಿಕೊಂಡಿದ್ದಾರೆ. ಮೃತರು ಮಹಿಳೆಯರಾಗಿದ್ದು, ಅವರ ಶರೀರಗಳು ಸಮುದ್ರದ ನೀರಿನಲ್ಲಿ ಪತ್ತೆಯಾಗಿವೆ. ಅಟಾಮಿಯಿಂದ 121 ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

ರಾಕೇಟ್ ವೇಗದಲ್ಲಿ ವ್ಯಾಪಿಸುತ್ತಿದೆ ಡೆಲ್ಟಾ ಪ್ಲಸ್..!

‘ಅಕ್ಟೋಬರ್-ನವೆಂಬರ್ ನಲ್ಲಿ ಕೋವಿಡ್ 3ನೇ ಅಲೆ ಗರಿಷ್ಟ ಮಟ್ಟಕ್ಕೆ ಏರಿಕೆ’

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd