ಭಾರತೀಯ ಕ್ರಿಕೆಟ್ ತಂಡದ ವೇಗಿ ಜಸ್ಪ್ರೀತ್ ಬುಮ್ರಾ ಐರ್ಲೆಂಡ್ (Ireland) ವಿರುದ್ಧ ನಡೆಯಲಿರುವ ಟಿ20 ಸರಣಿಗೆ ನಾಯಕನಾಗಿ ಆಯ್ಕೆಯಾಗಿದ್ದಾರೆ.
ಈಗಾಗಲೇ ಐರ್ಲೆಂಟ್ ವಿರುದ್ಧ ಆಡಲಿರುವ ಭಾರತೀಯ ಕ್ರಿಕೆಟ್ ತಂಡದ 15 ಜನ ಸದಸ್ಯರ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಆರಂಭಿಕ ಬ್ಯಾಟ್ಸ್ ಮನ್ ಋತುರಾಜ್ ಗಾಯಕ್ವಾಡ್‌ಗೆ (Ruturaj Gaikwad) ಉಪ ನಾಯಕನ ಜವಾಬ್ದಾರಿ ಹೊತ್ತಿದ್ದಾರೆ.
ಆಗಸ್ಟ್ 18 ರಿಂದ 23ರ ವರೆಗೆ ನಡೆಯಲಿರುವ ಐರ್ಲೆಂಡ್ ಟಿ20 ಸರಣಿಗೆ (Ireland T20I Series) ಸೋಮವಾರ ಭಾರತ ತಂಡ ಪ್ರಕಟವಾಗಿದ್ದು ಬುಮ್ರಾಗೆ ನಾಯಕತ್ವದ ಹೊಣೆ ನೀಡಲಾಗಿದೆ. ಈ ತಂಡದಲ್ಲಿ ಬಹುತೇಕ ಯುವ ಆಟಗಾರರಿಗೆ ಮಣೆ ಹಾಕಲಾಗಿದೆ.
ರಿಂಕು ಸಿಂಗ್, ತಿಲಕ್ ವರ್ಮಾ, ಯಶಸ್ವಿ ಜೈಸ್ವಾಲ್, ಜಿತೇಶ್ ಶರ್ಮಾ ಮೊದಲಾದವರಿಗೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಪ್ರಸಿದ್ಧ್ ಕೃಷ್ಣ ಕೂಡ ಕಂಬ್ಯಾಕ್ ಮಾಡಿದ್ದಾರೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಬುಬ್ರಾ ಸಂಪೂರ್ಣ ಫಿಟ್ ಆಗಿದ್ದಾರೆ. ಅವರು ಮತ್ತೆ ಟೀಂ ಇಂಡಿಯಾಕ್ಕೆ ಮರಳುತ್ತಿರುವುದು ಖುಷಿ ತಂದಿದೆ. ಮುಂದಿನ ವಿಶ್ವಕಪ್ ತಂಡದಲ್ಲಿ ಖಂಡಿತ ಅವರಿಗೆ ಸ್ಥಾನವಿದೆ ಎಂದು ಹೇಳಿದ್ದಾರೆ.








