ವೇಗವಾಗಿ 100 ವಿಕೆಟ್ ಪಡೆದ ಬುಮ್ರಾ : ಕಪಿಲ್ ದೇವ್ ದಾಖಲೆ ಪುಡಿ
ಲಂಡನ್ : ಟೀಂ ಇಂಡಿಯಾದ ಯಾರ್ಕರ್ ಕಿಂಗ್ ಜಸ್ಪ್ರೀತ್ ಬುಮ್ರಾ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತದ ಮಾಜಿ ನಾಯಕ ಕಪಿಲ್ ದೇವ್ ದಾಖಲೆ ಮುರಿದಿದ್ದಾರೆ. ಟೆಸ್ಟ್ ಕ್ರಿಕೆಟ್ ನಲ್ಲಿ ಬುಮ್ರಾ ಭಾರತದ ಪರ ಅತೀ ವೇಗವಾಗಿ 100 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.
ಇಂಗ್ಲೆಂಡ್ ವಿರುದ್ಧ ನಾಲ್ಕನೇ ಪಂದ್ಯದಲ್ಲಿ ಬುಮ್ರಾ ಇಂಗ್ಲೆಂಡ್ ನ ಬ್ಯಾಟ್ಸ್ಮನ್ ಒಲಿ ಪೋಪ್ ವಿಕೆಟ್ ಪಡೆಯುವ ಮೂಲಕ ಟೆಸ್ಟ್ ನಲ್ಲಿ ವೇಗವಾಗಿ 100 ವಿಕೆಟ್ ಪಡೆದುಕೊಂಡಿರುವ ಭಾರತದ ಮೊದಲ ಬೌಲರ್ ಎಂಬ ಸಾಧನೆ ಮಾಡಿದ್ದಾರೆ.
ಅಂದಹಾಗೆ ಕಪಿಲ್ ದೇವ್ 25 ಟೆಸ್ಟ್ ಪಂದ್ಯಗಳಿಂದ 100 ವಿಕೆಟ್ ಪಡೆದುಕೊಂಡಿದ್ದರು. ಬುಮ್ರಾ 24 ಟೆಸ್ಟ್ ಪಂದ್ಯಗಳಲ್ಲಿ 100 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.
ಇನ್ನುಳಿದಂತೆ ಇರ್ಫಾನ್ ಪಠಾಣ್ 28 ಟೆಸ್ಟ್ ಪಂದ್ಯಗಳಲ್ಲಿ ನೂರು ವಿಕೆಟ್ ಪಡೆದರೇ ಮೊಹಮ್ಮದ್ ಶಮಿ 29 ಟೆಸ್ಟ್ ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದರು. ಕನ್ನಡಿಗ ಜಾವಗಲ್ ಶ್ರೀನಾಥ್ 30 ಟೆಸ್ಟ್ ಪಂದ್ಯಗಳಲ್ಲಿ ನೂರು ವಿಕೆಟ್ ಪಡೆದರು.