Jasprit Bumrah: ಗಾಯದಿಂದ ಚೇತರಿಸಿಕೊಳ್ಳದ ಬುಮ್ರಾ – IPL ಅಲಭ್ಯ…
ಟೀಂ ಇಂಡಿಯಾದ ವೇಗದ ಬೌಲರ್ ಜಸ್ಪ್ರೀತ್ ಬುಮ್ರ ಬೆನ್ನುನೋವಿನಿಂದ ಸಂಪೂರ್ಣ ಚೇತರಿಸಿಕೊಳ್ಳಲು ವಿಫಲರಾದ ಕಾರಣ ಐಪಿಎಲ್‌ನಿಂದ ಹೊರಬಿದ್ದಿದ್ದಾರೆ. ಅಲ್ಲದೇ ಮುಂದಿನ ಆರು ತಿಂಗಳ ಕಾಲ ತಂಡಕ್ಕೆ ವಾಪಸ್ ಆಗುವ ಸಾಧ್ಯತೆ ಇಲ್ಲ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಬುಮ್ರಾ ಗಾಯದ ನೋವಿನಿಂದ ಕಳೆದ ವರ್ಷ ನಡೆದ ಟಿ20 ವಿಶ್ವಕಪ್ ಸೇರಿದಂತೆ ಹಲವು ಟೂರ್ನಿಗಳಿಂದ ಹೊರಗುಳಿದಿದ್ದಾರೆ. ಈ ನಡುವೆ ಇತ್ತೀಚೆಗೆ ತಂಡಕ್ಕೆ ವಾಪಸ್ಸಾಗುವ ಬಗ್ಗೆ ಸಾಕಷ್ಟು ನಿರೀಕ್ಷೆ ಇತ್ತು. ಆದರೆ ವೇಗಿ ಬುಮ್ರಾ ಅವರ ಬೆನ್ನು ನೋವಿನ ಸಮಸ್ಯೆ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ.
ಗಾಯದ ಸಮಸ್ಯೆಯಿಂದ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಜಸ್ಪ್ರೀತ್ ಬುಮ್ರಾ, ಐಪಿಎಲ್‌ನಿಂದ ಹೊರಗುಳಿದಿದ್ದಾರೆ ಅಲ್ಲದೇ, ತಂಡಕ್ಕೆ ಕಮ್ ಬ್ಯಾಕ್ ಮಾಡಲು ಕನಿಷ್ಠ ಆರು ತಿಂಗಳು ಹಿಡಿಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಅಲ್ಲದೇ ಪ್ರಮುಖವಾಗಿ ಜಸ್ಪ್ರೀತ್ ಬುಮ್ರಾ, ಏಕದಿನ ವಿಶ್ವಕಪ್ ವೇಳೆಗೆ ತಂಡಕ್ಕೆ ಮರಳುವ ನಿರೀಕ್ಷೆ ಇದ್ದರೂ, ಅದು ಕೂಡ ಖಾತರಿಯಿಲ್ಲ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
Jasprit Bumrah: Bumrah not recovered from injury – IPL unavailable…