ಲಖನೌ : ಎರಡು ಟ್ರಕ್ ಗಳು ಮುಖಾ ಮುಖಿ ಡಿಕ್ಕಿಯಾದ ಪರಿಣಾಮ 23 ವಲಸೆ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಔರೈಯಾ ಬಳಿ ನಡೆದಿದೆ.
ಇಂದು ಬೆಳಗ್ಗೆ 3.30ರ ಸುಮಾರಿಗೆ, ರಾಜಸ್ಥಾನದಿಂದ ಕಾರ್ಮಿಕರನ್ನ ಕರೆತರುತ್ತಿದ್ದ ಟ್ರಕ್ ಮತ್ತೊಂದು ಟ್ರಕ್ ಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ 15 ರಿಂದ 20 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಬಹುತೇಕ ಕಾರ್ಮಿಕರು ಬಿಹಾರ, ಜಾರ್ಖಂಡ್ ಹಾಗೂ ಪಶ್ಚಿಮ ಬಂಗಾಳ ಮೂಲದವರಾಗಿದ್ದಾರೆ ಎಂದು ಔರಯ್ಯದ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಭಿಷೇಕ್ ಸಿಂಗ್ ಹೇಳಿದ್ದಾರೆ.








