ಬೆಂಗಳೂರು, ಮೇ 15: ಜಯಕರ್ನಾಟಕ ಸಂಘಟನೆಯ ಮುಖ್ಯಸ್ಥ ಮುತ್ತಪ್ಪ ರೈ (68) ಶುಕ್ರವಾರ ಬೆಳಗ್ಗೆ ಎರಡು ಗಂಟೆ ಸುಮಾರಿಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲ ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮುತ್ತಪ್ಪ ರೈ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ಎರಡು ದಿನಗಳಿಂದ ಅವರ ಆರೋಗ್ಯದ ಪರಿಸ್ಥಿತಿ ಚಿಂತಾಜನಕವಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಮೂಲತಃ ಪುತ್ತೂರಿನ ಕೆಯ್ಯೂರು ನಿವಾಸಿಯಾಗಿದ್ದ ಮುತ್ತಪ್ಪ ರೈ ಅವರಿಗೆ ಇಬ್ಬರು ಪುತ್ರರು, ಮೂವರು ಸಹೋದರರು ಹಾಗೂ ಒಬ್ಬ ಸಹೋದರಿ ಇದ್ದಾರೆ. ಬೆಂಗಳೂರಿನ ಬಿಡದಿಯಲ್ಲಿರುವ ಅವರ ಸ್ವಗೃಹದಲ್ಲಿ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಸಾರ್ವಜನಿಕರಿಗೆ ಪಾಲ್ಗೊಳ್ಳಲು ಅವಕಾಶ ಇಲ್ಲ ಎಂದು ಕುಟುಂಬ ವರ್ಗ ತಿಳಿಸಿದೆ








