ನಟಿ ಅನುಷ್ಕಾ ಶೆಟ್ಟಿ ಸಹೋದರ ಗುಣರಂಜನ್ ಶೆಟ್ಟಿ ಹತ್ಯೆಗೆ ಸ್ಕೆಚ್…..
ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ದಿವಂಗತ ಮುತ್ತಪ್ಪ ರೈ ಬಳಗದಲ್ಲಿ ಗುರುತಿಸಿಕೊಂಡಿದ್ದ ಆಪ್ತರ ನಡುವೆ ಕೋಲ್ಡ್ ವಾರ್ ಶುರುವಾಗಿದೆ ಎಂಬ ಗುಮಾನಿ ಹರಿದಾಡುತ್ತಿದೆ. ಖ್ಯಾತ ನಟಿ ಅನುಷ್ಕ ಶೆಟ್ಟಿ ಸಹೋದರ ಗುಣರಂಜನ್ ಶೆಟ್ಟಿ ಹತ್ಯೆಗೆ ಸ್ಕೆಚ್ ಹಾಕಲಾಗಿದೆ ಎಂದು ಪೊಲೀಸರಿಗೆ ದೂರು ಸಲ್ಲಿಸಲಾಗಿದೆ.
ರಾಕೇಶ್ ಮಲ್ಲಿ, ಮನ್ಮಿತ್ ರೈ, ಗುಣರಂಜನ್ ಶೆಟ್ಟಿ ಮುತ್ತಪ್ಪ ರೈ ಆಪ್ತರಾಗಿದ್ದು, ರೈ ನಿಧನದ ನಂತರ ಬೇರೆ ಬೇರೆಯಾಗಿದ್ದರು. ಇದೀಗ ತನಗೆ ಕೊಲೆ ಬೆದರಿಕೆ ಇದೆ ಎಂದು ಗುಣರಂಜನ್ ಶೆಟ್ಟಿ ಆರೋಪಿಸಿದ್ದಾರೆ. ಈ ಬಗ್ಗೆ ಜಯ ಕರ್ನಾಟಕ ಸಂಘಟನೆಯ ಜನಪರ ವೇದಿಕೆ ಗೃಹ ಸಚಿವ ಆರಗ ಜ್ಞಾನೇಂದ್ರರಿಗೆ ದೂರು ನೀಡಿದೆ.
ಗುಣರಂಜನ್ ಶೆಟ್ಟಿ ಕೊಲೆಗೆ ಸಂಚು ವಿಚಾರವಾಗಿ ಇಂದು ಗೃಹಮಂತ್ರಿಗಳಿಗೆ ಸಂಘಟನೆ ವತಿಯಿಂದ ಮನವಿ ಸಲ್ಲಿಸಿದ್ದು, ಆರೋಪಿಗಳನ್ನು ಶೀಘ್ರವಾಗಿ ಪತ್ತೆ ಮಾಡುವಂತೆ ಕೇಳಿಕೊಂಡಿದ್ದಾರೆ.
ಗುಣರಂಜನ್ ಶೆಟ್ಟಿ ಹತ್ಯೆಗೆ ಸ್ಕೆಚ್ ವದಂತಿ ಹಿನ್ನೆಲೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಮನ್ಮಿತ್ ರೈ, ಈ ವಿಚಾರದಲ್ಲಿ ನನ್ನ ಹೆಸರು ಯಾಕೆ ಬರ್ತಾ ಇದೆ ಗೊತ್ತಿಲ್ಲ. ನಾನು ವ್ಯವಹಾರದ ಕಾರಣ ವಿದೇಶಕ್ಕೆ ಬಂದಿದ್ದೇನೆ. ಇದಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ. ತನಿಖೆ ಆಗ್ತಾ ಇದ್ರೆ ಯಾರ ಹೆಸರು ಇದೆಯೋ ಅದು ಹೊರಗೆ ಬರುತ್ತೆ. ಆದರೆ ಅದಕ್ಕೂ ಮೊದಲೇ ನನ್ನ ಹೆಸರು ಯಾಕೆ ಬಳಸುತ್ತಿದ್ದಾರೆ ಗೊತ್ತಿಲ್ಲ ಎಂದಿದ್ದಾರೆ..