ಕೋವಿಡ್ ಸಂಕಷ್ಟ : ಜೆಕೆ, ಐರಾವನ್ ಚಿತ್ರತಂಡದಿಂದ ಆಕ್ಸಿಜನ್ – ಆಂಬುಲೆನ್ಸ್ , ಮೆಡಿಕಲ್ ಕಿಟ್ ನೆರವು
ಬೆಂಗಳೂರು: ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ.. ಈ ನಡುವೆ ಸ್ಯಾಂಡಲ್ ವುಡ್ , ಬಾಲಿವುಡ್ , ಟಾಲಿವುಡ್ , ಕಾಲಿವುಡ್ ನ ಅನೇಕ ಸಿನಿಮಾ ತಾರೆಯರು ಬಡವರಿಗೆ , ಕೋವಿಡ್ ಸೋಂಕಿತರಿಗೆ ತಮಗೆ ತೋಚಿದ ಸಹಾಯಗಳನ್ನ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್ , ಶ್ರೀಮುರುಳಿ, ರಾಗಿಣಿ, ಅಕ್ಷಯ್ ಕುಮಾರ್ , ಸಲ್ಮಾನ್ ಖಾನ್ , ಸೋನು ಸೂದ್ , ಹೀಗೆ ಹಲವರು ಕಷ್ಟದ ಸಂದರ್ಭದಲ್ಲಿ ಸಹಾಯಾಸ್ತ ಚಾಚಿದ್ದಾರೆ.
ಇದೀಗ ಸ್ಯಾಂಡಲ್ ವುಡ್ ನಟ ಜಯರಾಮ್ ಕಾರ್ತಿಕ್ ಕೂಡ ಕೊರೊನಾ ಸಂಕಷ್ಟದಲ್ಲಿರುವವರಿಗೆ ನೆರವು ನೀಡುತ್ತಿದ್ದಾರೆ. ನಟ ಜೆಕೆ ಹಾಗೂ ಅದ್ವಿತಿ ಶೆಟ್ಟಿ ಅಭಿನಯಿಸುತ್ತಿರುವ ‘ಐರಾವನ್’ಚಿತ್ರತಂಡ ಆಕ್ಸಿಜನ್ ವ್ಯವಸ್ಥೆಯುಳ್ಳ ಅಂಬುಲೆನ್ಸ್ ನೀಡಿದ್ದಾರೆ. ಅಲ್ಲದೇ ಚಿತ್ರ ನಿರ್ಮಾಪಕ ಡಾ. ನಿರಂತರ್ ಗಣೇಶ್, ನಟ ಕಾರ್ತಿಕ್, ಮತ್ತು ನಟ ವಿವೇಕ್ ಭಾನುವಾರ ಬ್ಯಾಟರಾಯಪುರದಲ್ಲಿ 10 ಸಾವಿರ ಕೋವಿಡ್ ಮೆಡಿಕಲ್ ಕಿಟ್ ಮತ್ತು ಔಷಧಿಯನ್ನು ವಿತರಣೆ ಮಾಡಿದ್ದಾರೆ. ಈ ಕುರಿರತಂತೆ ಜೆಕೆ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಫೋಟೋವನ್ನು ಹಂಚಿಕೊಂಡಿದ್ದು, ಆರೋಗ್ಯ ಭಾರತಿ ಮತ್ತು ಸೇವಾ ಭಾರತಿ ಪರವಾಗಿ ಐರಾವನ್ ಚಿತ್ರ ನಿರ್ಮಾಪಕ ಡಾ. ನಿರಂತರಾ ಗಣೇಶ್ ಅವರೊಂದಿಗೆ ಬ್ಯಾಟರಾಯನಪುರದ ಗ್ರಾಮೀಣ ಜನರ ಸೇವೆಗಾಗಿ ಆಕ್ಸಿಜನ್ ಸಹಿತ ಅಂಬ್ಯುಲೆನ್ಸ್ ದಾನ ಮಾಡಲಾಗಿದೆ. ಹಾಗೂ 10,000 ಕೋವಿಡ್ ಮೆಡಿಕಲ್ ಕಿಟ್ನನ್ನು, ಕೋವಿಡ್-19 ಚಿಕಿತ್ಸೆ ನೀಡಲು ಅಗತ್ಯವಿರುವ ಎಲ್ಲಾ ಔಷಧಿಗಳನ್ನು ನೀಡಲಾಗಿದೆ. ಈ ಸಂದರ್ಭದಲ್ಲಿ RSS ದಕ್ಷಿಣ ವಲಯದ ಪ್ರಧಾನ ಕಾರ್ಯದರ್ಶಿ ಎನ್. ತಿಪ್ಪೇಸ್ವಾಮಿ, ಆರೋಗ್ಯ ಭಾರತಿ ಕರ್ನಾಟಕ ರಾಜ್ಯ ಜೆ.ಟಿ ಕಾರ್ಯದರ್ಶಿ ಗಂಗಾಧರನ್, ಐರಾವನ್ ಚಲನಚಿತ್ರ ನಟ ವಿವೇಕ್ ಧ್ವಜಾರೋಹಣ ಮಾಡಿದ ನಂತರ ಕೋವಿಡ್-19 ವೈದ್ಯಕೀಯ ಕಿಟ್ಗಳನ್ನು ಸಾರ್ವಜನಿಕರಿಗೆ ವಿತರಿಸಿದರು ಎಂದು ಬರೆದುಕೊಂಡಿದ್ಧಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








