ಮಾಜಿ ಸ್ಪೀಕರ್ ರಮೇಶ ಕುಮಾರ ವಿರುದ್ಧ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

1 min read
JDS Protest Saaksha Tv

ಮಾಜಿ ಸ್ಪೀಕರ್ ರಮೇಶ ಕುಮಾರ ವಿರುದ್ಧ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

ಕೋಲಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಕಳೆದ ತಿಂಗಳು ವಿಧಾನಸಭೆಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿ ರಾಷ್ಟ್ರಾದ್ಯಂತ ಸುದ್ದಿಯಾಗಿದ್ದರು. ಇಗ ಮತ್ತೋದು ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ. ಜೆಡಿಎಸ್ ಮುಖಂಡ ತೂಪಲ್ಲಿ ನಾರಾಯಣಸ್ವಾಮಿ ಅವರಿಗೆ ಅವಾಚ್ಯ ಶಬ್ದದಿಂದ ನಿಂದನೆ ಮಾಡಿದ್ದಾರೆ. ಈ ಘಟನೆ ವಿರುದ್ಧ ಇಂದು ಶ್ರೀನಿವಾಸಪುರದಲ್ಲಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿದರು.

ನಗರದ ಇಂದಿರಾ ಭವನ್ ಸರ್ಕಲ್ ನ ರಸ್ತೆಯಲ್ಲಿ ಟೈರ್ ಗೆ ಬೆಂಕಿ ಹಾಕಿ ಮಾಜಿ ಸ್ಪಿಕರ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ರಮೇಶ್ ಕುಮಾರ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸುವಂತೆ ಜೆಡಿಎಸ್ ಕಾರ್ಯಕರ್ತರು ಒತ್ತಾಯಿಸಿದರು. ಇವರ ಗುಂಡಾ ವರ್ತನೆ ಖಂಡಿಸಿ ನಗರದಲ್ಲಿ ಇಂದು ಜೆಡಿಎಸ್ ಪಕ್ಷ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಿದೆ.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd