ಜೆಡಿಎಸ್ ಅಭ್ಯರ್ಥಿ ಅಪ್ಪಾಜಿ ಗೌಡ ನಾಮಪತ್ರ ಸಲ್ಲಿಕೆ JDS saaksha tv
ಮಂಡ್ಯ : ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿ ಅಪ್ಪಾಜಿ ಗೌಡ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಮಂಡ್ಯದ ಸರ್ ಎಂ.ವಿ ಪ್ರತಿಮೆಯಿಂದ ಮೆರವಣಿಗೆ ಮೂಲಕ ಮಂಡ್ಯ ಡಿಸಿ ಕಚೇರಿಗೆ ಆಗಮಿಸಿದ ಅಪ್ಪಾಜಿ ಗೌಡ, ಜಿಲ್ಲಾಧಿಕಾರಿಗಳಿಗೆ ಉಮೇದುವಾರಿಕೆ ಸಲ್ಲಿಕೆ ಮಾಡಿದರು.
ಇನ್ನು ಮೆರವಣಿಗೆಯಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಶಾಸಕರಾದ ಸಿಎಸ್ ಪುಟ್ಟರಾಜು,
ರವೀಂದ್ರ ಶ್ರೀಕಂಠಯ್ಯ, ಡಾ.ಕೆ.ಅನ್ನದಾನಿ, ಎಂ.ಶ್ರೀನಿವಾಸ್, ಡಿಸಿ ತಮ್ಮಣ್ಣ, ಸುರೇಶ್ ಗೌಡ, ಕೆಟಿ ಶ್ರೀಕಂಠೇಗೌಡ ಭಾಗಿಯಾಗಿದ್ದರು.









