ಪರಿಷತ್ ನ 25 ಸ್ಥಾನಗಳ ಪೈಕಿ 7 ಸ್ಥಾನಗಳಲ್ಲಿ ಜೆಡಿಎಸ್ ಸ್ಪರ್ಧೆ JDS saaksha tv
ಮೈಸೂರು : ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ನ 25 ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಏಳು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ನ 25 ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಏಳು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.
ಸ್ಥಳೀಯ ನಾಯಕರು ನೀಡಿರುವ ಸಲಹೆಯನ್ನು ಗಮನದಲ್ಲಿಟ್ಟುಕೊಂಡು ತೀರ್ಮಾನ ತೆಗೆದುಕೊಳ್ಳಲಾಗಿದೆ.
ಗೆಲುವಿಗೆ ಅವಕಾಶವಿರುವಲ್ಲಿ ಸ್ಪರ್ಧಿಸುತ್ತಿದ್ದೇವೆ. ಪಕ್ಷದ ಕಾರ್ಯಕರ್ತರ ಶಕ್ತಿಯು ಸದೃಢವಾಗಿದ್ದು, ಹೊಸ ನಾಯಕರನ್ನು ಕಾರ್ಯಕರ್ತರೇ ಸೃಷ್ಟಿಸುತ್ತಾರೆ ಎಂಬ ಭರವಸೆಯಿದೆ ಎಂದು ಹೇಳಿದರು.
ಇದೇ ವೇಳೆ ಕೆ.ಎಸ್.ಈಶ್ವರಪ್ಪಗೆ ಟಾಂಗ್ ನೀಡಿದ ಕುಮಾರಸ್ವಾಮಿ, ನಮ್ಮ ಶಂಖವನ್ನ ನಾನೇ ಊದಬೇಕು.
ಹೀಗಾಗಿ ಎಲ್ಲಾ ಕ್ಷೇತ್ರಗಳಲ್ಲಿಯೂ ನಾನೇ ಪ್ರಚಾರ ಮಾಡುತ್ತೇನೆ. ನಮಗೆ ಕಾರ್ಯಕರ್ತರೇ ಶಕ್ತಿ, ಕಾರ್ಯಕರ್ತರಿಗೆ ನಾಯಕನನ್ನು ಹುಟ್ಟುಹಾಕುವ ಸಾಮಥ್ರ್ಯ ಇರೋದು.
ಹೀಗಾಗಿ ಬಂಡೇಳುವ ಶಾಸಕರ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ. ಪರ್ಯಾಯ ನಾಯಕರನ್ನು ಕಾರ್ಯಕರ್ತರೇ ಹುಡುಕಿಕೊಂಡಿದ್ದಾರೆ ಎಂದು ಕುಮಾರಸ್ವಾಮಿ ಟಾಂಗ್ ನೀಡಿದರು.