ಎನ್ ಡಿಎ ಮಿತ್ರಪಕ್ಷ ಸೇರಲು ಜೆಡಿಎಸ್ ಚಿಂತನೆ ??
ಬೆಂಗಳೂರು, ಜನವರಿ03 : ಕರ್ನಾಟಕದ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಬಿಜೆಪಿ ಜೊತೆ ಜೆಡಿಎಸ್ ಕೈಜೋಡಿಸಿದೆ ಎಂದು ಹೇಳಲಾಗಿದೆ.
ಎನ್ ಡಿಎ ಮಿತ್ರಪಕ್ಷ ಆಗಲು ಜೆಡಿಎಸ್ ನಿರ್ಧರಿಸಿದ್ದು, ಈ ಸಂಬಂಧ ಶೀಘ್ರವೇ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಲಾಗುತ್ತಿದೆ.

ಜೆಡಿಎಸ್ ನ ಉನ್ನತ ಮೂಲಗಳು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಜೆಡಿಎಸ್ ಪಕ್ಷವನ್ನು ಎನ್ ಡಿಎ ಜೊತೆ ಸೇರಿಸಲಿದ್ದಾರೆಂದು ತಿಳಿಸಿವೆ. ರಾಜ್ಯದಲ್ಲಿ ಕಾಂಗ್ರೆಸ್ ಅನ್ನು ಹಣೆಯುವ ಉದ್ದೇಶದಿಂದ ಜೆಡಿಎಸ್
ಬಿಜೆಪಿ ಜೊತೆ ಕೈಜೋಡಿಸಲು ನಿರ್ಧರಿಸಿದ್ದು, ಎನ್ ಡಿಎ ಮಿತ್ರಪಕ್ಷ ಸೇರಲು ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.

ಮುಂದಿನ ವರ್ಷ ಜೂನ್ ನಲ್ಲಿ ನಾಲ್ವರು ರಾಜ್ಯಸಭಾ ಸದಸ್ಯರು ನಿವೃತ್ತರಾಗಲಿದ್ದು, ಅದರಲ್ಲಿ ಒಂದು ಸ್ಥಾನ ಜೆಡಿಎಸ್ ಸುಲಭವಾಗಲಿ ಗೆಲ್ಲಲಿದೆ. ಆ ಸ್ಥಾನದಲ್ಲಿ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಗೆಲ್ಲಿಸಿ ಕೇಂದ್ರದಲ್ಲಿ ಅವರನ್ನು ಸಚಿವರನ್ನಾಗಿ ಮಾಡುವ ಬಗ್ಗೆ ಚರ್ಚೆಗಳು ನಡೆದಿದೆ ಎಂದು ಹೇಳಲಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel
ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
https://twitter.com/SaakshaTv/status/1344696988034498560?s=19
https://twitter.com/SaakshaTv/status/1345416227078848512?s=19








