ಹಾಸನ : ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಇಂದು ವಿಧಾನಸಭೆ ಅಧಿವೇಶನ ಇದ್ದರೂ ಕುಟುಂಬ ಸಮೇತ ಹಾಸನದ ಖಾಸಗಿ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ.
ಹೆಚ್.ಡಿ ಕುಮಾರಸ್ವಾಮಿ ಅವರು ಪತ್ನಿ ಅನಿತಾ ಕುಮಾರಸ್ವಾಮಿ, ಮಗ ನಿಖಿಲ್ ಮತ್ತು ಸೊಸೆ ರೇವತಿ ಜೊತೆ ಕುಟುಂಬ ಸಮೇತರಾಗಿ ಹಾಸನ ಪ್ರವಾಸ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಸದ್ಯ ಕುಮಾರಸ್ವಾಮಿ ಕುಟುಂಬ ಹಾಸನದ ಹೊಯ್ಸಳ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ರೆಸಾರ್ಟಿಗೆ ಕಾರ್ಯಕರ್ತರು ಮತ್ತು ಮಾಧ್ಯಮಗಳಿಗೆ ನಿರ್ಬಂಧ ಹೇರಲಾಗಿದೆ.

ಇನ್ನು ರೆಸಾರ್ಟ್ ನಲ್ಲಿರುವ ಕುಮಾರಸ್ವಾಮಿ ಕುಟುಂಬ ಕೊರೊನಾ ಭೀತಿ ಹಿನ್ನೆಲೆಯಲ್ಲಿ ಸ್ವ್ಯಾಬ್ ಟೆಸ್ಟ್ ಮಾಡಿಸಿದ್ದಾರೆ.
ಕೊರೊನಾ ವರದಿ ಬಂದ ನಂತರ ಕುಮಾರಸ್ವಾಮಿ ಬೆಂಗಳೂರಿಗೆ ತೆರಳುವ ಸಾಧ್ಯತೆ ಇದೆ.








