ಬಿಜೆಪಿ ಜೊತೆ ಜೆಡಿಎಸ್ ಒಳ ಒಪ್ಪಂದ ನಿಜ : ಜೆಡಿಎಸ್ ಶಾಸಕ ಬಾಂಬ್
ತುಮಕೂರು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ನಾವು ಹಲವು ಕ್ಷೇತ್ರಗಳಲ್ಲಿ ಒಡಂಬಡಿಕೆ ಮಾಡಿಕೊಂಡು ಚುನಾವಣೆಗೆ ಹೋಗಿದ್ದು ನಿಜ ಎಂದು ಜೆಡಿಎಸ್ ಶಾಸಕ ಎಸ್.ಆರ್. ಶ್ರೀನಿವಾಸ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನನ್ನನ್ನು ಸೋಲಿಸಲು ಬಿಜೆಪಿ ಜೊತೆ ಜೆಡಿಎಸ್ ಒಳಒಪ್ಪಂದ ಮಾಡಿಕೊಂಡಿತ್ತು ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ನೀಡದ ಶ್ರೀನಿವಾಸ್, ಜೆಡಿಎಸ್, ಬಿಜೆಪಿ ಜೊತೆ ಒಳ ಒಪ್ಪಂದ ಮಾಡಿಕೊಂಡಿರುವುದು ಇಡೀ ದೇಶಕ್ಕೆ ಗೊತ್ತಿದೆ.
ಸಿದ್ದರಾಮಯ್ಯ ಅವರಿಗೆ ಈಗ ತಿಳಿದಿದೆ. ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯರನ್ನ ಸೋಲಿಸಬೇಕೆಂದು ಬಿಜೆಪಿ ಬೆಂಬಲ ನೀಡಿದ್ದು ನಿಜ.
ಮುಂದಿನ ಗುರಿ ಬೆಳಗಾವಿ ಗ್ರಾಮೀಣ ; ಕಡು ವಿರೋಧಿ ಲಕ್ಷ್ಮಿ ಹೆಬ್ಬಾಳಕರ್ ಸೋಲಿಸಲು ರಮೇಶ್ ಸಾಹುಕಾರ ಪಣ..!
ಅದೊಂದೇ ಕ್ಷೇತ್ರವಲ್ಲ ಸುಮಾರು ಕ್ಷೇತ್ರಗಳಲ್ಲಿ ಬಿಜೆಪಿ ನಾವು ಒಳ ಒಪ್ಪಂದ ಮಾಡಿಕೊಂಡು ಚುನಾವಣೆಗೆ ಹೋಗಿದ್ದೀವಿ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಈ ಹೇಳಿಕೆ ಸದ್ಯ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ.
ಇನ್ನು ಇದೇ ವೇಳೆ ಜೆಡಿಎಸ್ ತೊರೆಯುವ ಬಗ್ಗೆ ಮಾತನಾಡಿ, ನಾನು ಯಾವುದೇ ಪಕ್ಷಕ್ಕೂ ಹೋಗುತ್ತಿಲ್ಲ. ನನಗೆ ರಾಜಕೀಯ ಬೇಸರವಾಗಿದೆ. ಪ್ರಸ್ತುತ ರಾಜಕೀಯ ವ್ಯವಸ್ಥೆ ಅಸಹ್ಯಪಡುವಂತಿದೆ ಎಂದು ತಿಳಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel