JDS | ನವೆಂಬರ್ 1 ರಿಂದ ಜೆಡಿಎಸ್ ಪಂಚರತ್ನ ರಥಯಾತ್ರೆ
ಬೆಂಗಳೂರು : ನವೆಂಬರ್ 1 ಕನ್ನಡ ರಾಜ್ಯೋತ್ಸವ ದಿನದಿಂದ ಜೆಡಿಎಸ್ ಪಕ್ಷ ಮಹತ್ವಾಕಾಂಕ್ಷೆಯ ಪಂಚರತ್ನ ರಥಯಾತ್ರೆಗೆ ಚಾಲನೆ ನೀಡುವುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಘೋಷಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಕುಮಾರಸ್ವಾಮಿ, ಜೆಡಿಎಸ್ ಪಕ್ಷ ಕೇವಲ ಹಳೇ ಮೈಸೂರು ಭಾಗಕ್ಕೆ ಮಾತ್ರ ಸೀಮಿತವಾಗಲ್ಲ.
ರಾಜ್ಯದೆಲ್ಲೆಡೆ ಪಕ್ಷವನ್ನು ಸಂಘಟನೆ ಮಾಡುತ್ತಿದ್ದೇವೆ. ಅದರ ಭಾಗವಾಗಿ ಪಕ್ಷದ ಮಹತ್ವಾಕಾಂಕ್ಷೆಯ ಪಂಚರತ್ನ ರಥಯಾತ್ರೆ ನವೆಂಬರ್ 1 ರಿಂದ ಆರಂಭವಾಗಲಿದೆ.

ಆ ಕುರಿತಾಗಿ ಪೂರ್ವ ಸಿದ್ಧತೆ ಕಾರ್ಯಗಳು ನಡೆಯುತ್ತಿವೆ. ವಾಹನಗಳು ಸಿದ್ದಗೊಳ್ಳುತ್ತಿವೆ ಎಂದು ತಿಳಿಸಿದರು.
ಇನ್ನು ಕಲ್ಯಾಣ ಕರ್ನಾಟಕ ಭಾಗದಲ್ಲಿ ಈಗಾಗಲೇ ನಾವು ಪಕ್ಷ ಸಂಘಟನೆ ಆರಂಭಿಸಿದ್ದೇವೆ.
ಉತ್ತರ ಕರ್ನಾಟಕದಲ್ಲಿ ಜೆಡಿಎಸ್ ಅಸ್ತಿತ್ವ ಏನು ಎಂಬುದನ್ನ ಪಂಚರತ್ನ ರಥಯಾತ್ರೆ ಮೂಲಕ ತೋರಿಸುತ್ತೇವೆ.
ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ರಾವ್ ಜೆಡಿಎಸ್ ಪರ ಪ್ರಚಾರ ಮಾಡಲಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.