ಮಂಡ್ಯ : ಕೊರೊನಾ ಟೆಸ್ಟ್ ನಡೆಸದಂತೆ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಜನರನ್ನು ಎತ್ತಿಕಟ್ಟಿ ಗಲಾಟೆ ಮಾಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.
ನಗರದ ಅಂಬೇಡ್ಕರ್ ಭವನದಲ್ಲಿಂದು ಪತ್ರಕರ್ತರಿಗೆ ಕೋವಿಡ್ ಟೆಸ್ಟ್ ನಡೆಯುತ್ತಿತ್ತು. ಭವನದ ಬಳಿ ಶ್ರೀಕಂಠೇಗೌಡರ ಮನೆ ಇರುವ ಕಾರಣಕ್ಕೆ ಪರೀಕ್ಷೆ ಮಾಡಬೇಡಿ ಎಂದು ಜನರನ್ನು ಕರೆತಂದು ಗಲಾಟೆ ಮಾಡಿದ್ದಾರೆ. ಅಲ್ಲದೆ ಶ್ರೀಕಂಠೇಗೌಡರ ಪುತ್ರ ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಈ ವೇಳೆ ಪೊಲೀಸರು ಪರಿಸ್ಥಿತಿಯಲ್ಲಿ ತಿಳಿಗೊಳಿಸುವ ಸಲುವಾಗಿ ಲಘು ಲಾಠಿ ಚಾರ್ಜ್ ಮಾಡಿದ್ದಾರೆ. ಅಲ್ಲದೆ ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಶ್ರೀಕಂಠೆಗೌಡರ ಪುತ್ರನನ್ನು ವಶಕ್ಕೆ ಪಡೆದು ಪರೀಕ್ಷೆ ನಡೆಸಲು ಅನುವು ಮಾಡಿಕೊಟ್ಟಿದ್ದಾರೆಂದು ತಿಳಿದುಬಂದಿದೆ.
ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ
ಬೆಂಗಳೂರು: ರಾಜ್ಯದ ಜನರ ಆರೋಗ್ಯದ ಹಿತದೃಷ್ಟಿಯಿಂದ ಪಾನ್ ಮಸಾಲ ಹಾಗೂ ಗುಟ್ಕಾವನ್ನು ಸಂಪೂರ್ಣವಾಗಿ ನಿಷೇಧಿಸಲು ಕರ್ನಾಟಕ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ರಾಜ್ಯದ ಬೊಕ್ಕಸಕ್ಕೆ ನೂರು ಕೋಟಿ...








