`ತೆನೆ’ ಇಳಿಸಿ `ಕೈ’ ಹಿಡಿಯಲಿದ್ದಾರೆ ಎನ್.ಎಚ್.ಕೋನರೆಡ್ಡಿ JDS MLA konareddy saaksha tv
ಧಾರವಾಡ : ಮುಂದಿನ ಚುನಾವಣೆಯಲ್ಲಿ ಸ್ವಂತ ಬಲದಿಂದ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿರುವ ಜೆಡಿಎಸ್ ಗೆ ಶಾಕ್ ಎದುರಾಗಿದೆ.
ಉತ್ತರ ಕರ್ನಾಟಕ ಭಾಗದ ಪ್ರಮುಖ ಜೆಡಿಎಸ್ ನಾಯಕ ಎಂದು ಎನಿಸಿಕೊಂಡಿದ್ದ ಕೋನರೆಡ್ಡಿ ನಾಳೆ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ.
ನವಲಗುಂದ ಕ್ಷೇತ್ರದ ಜೆಡಿಎಸ್‍ನ ಮಾಜಿ ಶಾಸಕ ಎನ್.ಎಚ್ ಕೋನರೆಡ್ಡಿ ನಾಳೆ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೆ ಸೇರ್ಪಡೆಗೊಳ್ಳಲಿದ್ದಾರೆ.
ಜೆಡಿಎಸ್ ಪಕ್ಷದಲ್ಲಿದ್ದರೂ ವಿಧಾನಪರಿಷತ್ ಚುನಾವಣೆಯಲ್ಲಿ ಕೋನರೆಡ್ಡಿ ಕಾಂಗ್ರೆಸ್ ಪರ ಕೆಲಸ ಮಾಡಿದ್ದರು. ನಾಳೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಕೈ ಹಿಡಿಯಲಿದ್ದಾರೆ.
ವಿಪಕ್ಷ ನಾಯಕ ಸಿದ್ದರಾಮಯ್ಯ ನಾಳೆ ನಾಳೆ ಬೆಳಗಾವಿ ಅಧಿವೇಶನಕ್ಕೆ ಆಗಮಿಸುತ್ತಿದ್ದಾರೆ. ಅವರ ಸಮ್ಮುಖದಲ್ಲೇ ಬೆಳಗಾವಿ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಕೋನರೆಡ್ಡಿ ಕೈ ಸೇರ್ಪಡೆ ಆಗಲಿದ್ದಾರೆ.