MLA Puttaraju | ಸುಮಲತಾ ಹೇಳಿದ ದಿನ ನಾನು ಆಣೆ ಮಾಡಲು ರೆಡಿ
ಮಂಡ್ಯ : ಸುಮಲತಾ ಹೇಳಿದ ದಿನ ನಾನು ಆಣೆ ಮಾಡಲು ರೆಡಿ ಎಂದು ಮೇಲುಕೋಟೆ ಸನ್ನಿಧಿಯಲ್ಲಿ ನಿಂತು ಸಂಸದೆ ಸುಮಲತಾ ಸವಾಲನ್ನು ಜೆಡಿಎಸ್ ಶಾಸಕ ಪುಟ್ಟರಾಜು ಸ್ವೀಕರಿಸಿದ್ದಾರೆ.
ಮೇಲುಕೋಟೆಯಲ್ಲಿ ಮಾತನಾಡಿದ ಪುಟ್ಟರಾಜು, ಜನ ಅವರನ್ನು ಆಯ್ಕೆ ಮಾಡಿರುವುದು ಕೆಲಸ ಮಾಡಲು, ಅಂಬರೀಶ್ ಅವರ ಪತ್ನಿ ಎನ್ನುವ ಕಾರಣಕ್ಕೆ ಅವರು ಗೆದ್ದಿದ್ದಾರೆ. ಶಾಸಕನಾಗಿ ನಾನು ಸದನದಲ್ಲಿ ಯಾವ ರೀತಿ ಮಾತನಾಡಿದ್ದೇನೆ ಇತಿಹಾಸ ತೆಗೆದು ನೋಡಲಿ. ಮಾತನಾಡುವುದರಿಂದ ದೊಡ್ಡ ಲೀಡರ್ ಆಗುತ್ತೀನಿ ಅಂದು ಕೊಂಡಿದ್ರೆ ಬಿಡಿ. ಗೌರವದಿಂದ ರಾಜಕಾರಣ ಮಾಡಿ. ನನ್ನ ವ್ಯಕ್ತಿತ್ವ ಅಂಬರೀಶ್ ಅವರಿಗೆ ಗೊತ್ತಿತ್ತು. ನಮ್ಮ ಮನೆ ದುಡ್ಡು ಹಾಕಿ, ಅಂಬರೀಶ್ ಅವರಿಗೆ ಚುನಾವಣೆ ಮಾಡಿದ್ದೆ. ಅಂಬರೀಶ್ ಹಾಗೂ ನನ್ನ ಸಂಬಂಧ ಎಂತದ್ದು ಅನ್ನೋದನ್ನ ರಾಕ್ ಲೈನ್ ಅವರನ್ನ ಕೇಳಿ. ಅಂಬಿ ಅವರ ಕಡೇ ದೀಪಾವಳಿ ನಾನು ಅವರ ಜೊತೆ ಆಚರಿಸಿದ್ದೆ. ಅಂಬರೀಶ್ ಕುಟುಂಬ ಸೇರಿದಂತೆ ಜಿಲ್ಲೆಯ ಎಲ್ಲಾ ರಾಜಕಾರಣಿಗಳು ಮೂಡಾ ಸೈಟ್ ಪಡೆದಿದ್ದಾರೆ.
ಈ ವಿಚಾರವಾಗಿ ನನ್ನ ವಿರುದ್ಧ ಕೋರ್ಟ್ ಕೇಸ್ ಇದೆ. ಜನಪ್ರತಿನಿಧಿಗಳ ನ್ಯಾಯಾಲಯ ಹೊರ ದೇಶಕ್ಕೆ ಹೋಗುವುದಾದರೆ ಅನುಮತಿ ಪಡೆಯುವಂತೆ ಹೇಳಿದೆ. ನನ್ನ ದಂತ ಚಿಕಿತ್ಸೆಗೆ ವಿದೇಶಕ್ಕೆ ಹೋಗಲು ಅನುಮತಿ ಕೇಳಿದ್ದೆ. ದಾಖಲೆಗಳಿದ್ರೆ ತರಲಿ, ಅವರ ವಿರುದ್ಧ ನಮ್ಮ ಬಳಿಯೂ ದಾಖಲೆಗಳಿವೆ. ಚುನಾವಣೆ ಬಂದಾಗಲೆಲ್ಲಾ ಈ ಸೈಟ್ ವಿಚಾರ ತೆಗೆಯುತ್ತಾರೆ. ಇದು ದೊಡ್ಡ ಷಡ್ಯಂತ್ರವಾಗಿದೆ. ಚೆಲುವನಾರಾಯಣನ ಸನ್ನಿಧಿಯಲ್ಲಿ ನಿಂತು ಮಾತನಾಡುತ್ತಿದ್ದೇನೆ. ಮೂಡಾ ಸೈಟ್ ಹಗರಣದಲ್ಲಿ ನಮ್ಮ ಎಳ್ಳಷ್ಟೂ ಪಾತ್ರವಿಲ್ಲ. ನ್ಯಾಯಾಲಯದಲ್ಲಿ ನಮ್ಮ ಪರ ತೀರ್ಪು ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.