ಮೈಸೂರು: ಜೆಡಿಎಸ್ ನಾಯಕರ ವಿರುದ್ಧ ಆಗಾಗ ವಾಗ್ಬಾಣ ಬಿಡುತ್ತಲೇ ಬಂದಿರುವ ಹಳ್ಳಿಹಕ್ಕಿ ಹೆಚ್.ವಿಶ್ವನಾಥ್, ಈ ಬಾರಿ ತೆನೆಹೊತ್ತ ಪಕ್ಷವನ್ನು ಮಿಠಾಯಿ ಪಕ್ಷವೆಂದು ಲೇವಡಿ ಮಾಡಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಎಂಎಲ್‍ಸಿ ವಿಶ್ವನಾಥ್, ಜೆಡಿಎಸ್ ಪಕ್ಷವೆಂಬುದು ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಒಂದು ಮಗು. ಆ ಮಗುವಿಗೆ ಯಾರು ಮಿಠಾಯಿ ತೋರಿಸುತ್ತಾರೋ ಅವರ ಕಡೆಗೆ ಹೋಗುತ್ತದೆ ಎಂದು ಟಾಂಗ್ ನೀಡಿದ್ದಾರೆ.
ಮಂಗಳವಾರ(ನಿನ್ನೆ) ವಿಧಾನ ಪರಿಷತ್ ಸಭಾಪತಿ ಪ್ರತಾಪ್‍ಚಂದ್ರ ಶೆಟ್ಟಿ ವಿರುದ್ಧ ಬಿಜೆಪಿ ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಜೆಡಿಎಸ್ ಬೆಂಬಲ ನೀಡಿತ್ತು. ಈ ಘಟನೆಯನ್ನು ಮುಂದಿಟ್ಟುಕೊಂಡು ಜೆಡಿಎಸ್ ಪಕ್ಷವನ್ನು ಮಗುವಿಗೆ ಹೋಲಿಕೆ ಮಾಡಿ ವಿಶ್ವನಾಥ್, ಜೆಡಿಎಸ್ ಒಂದು ಮಗುವಿನಂತೆ. ಅದಕ್ಕೆ ಯಾರು ಮಿಠಾಯಿ ತೋರಿಸುತ್ತಾರೋ ಅವರ ಕಡೆಗೆ ಹೋಗುತ್ತದೆ. ಹೀಗಾಗಿ, ಅವರ ಬಗ್ಗೆ ಹೆಚ್ಚು ಮಾತನಾಡೋದು ಬೇಡ ಎಂದಿದ್ದಾರೆ.
ಯಾರು ಜನತಂತ್ರ ವ್ಯವಸ್ಥೆ ಬಗ್ಗೆ ಭಾಷಣ ಮಾಡಿದ್ರೋ ಅವರೇ ನಿನ್ನೆ ಸದನದಲ್ಲಿ ಕೊಚ್ಚಿಕೊಚ್ಚಿ ಕೊಂದಿದ್ದಾರೆ. ಸದನವನ್ನ ನಾವು ದೇವಾಲಯ ಅಂದಿದ್ದೆವು. ಅದಕ್ಕೆ ಪ್ರಧಾನಿ ಲೋಕಸಭೆಗೆ ಹಣೆಯಿಟ್ಟು ನಮಸ್ಕಾರ ಮಾಡಿ ಹೋಗಿದ್ದರು. ಅಂತಹ ಸಾರ್ವಭೌಮ ಸದನದ ಬಾಗಿಲನ್ನು ನಿನ್ನೆ ಕಾಂಗ್ರೆಸ್‍ನವರು ಬೂಟಿನ ಕಾಲಿನಲ್ಲಿ ಒದ್ದರು. ಭಾರತಾಂಬೆ ನಮ್ಮನ್ನು ಕ್ಷಮಿಸಲಿ, ಅಧಿಕಾರ ಕೊಟ್ಟ ಜನರು ನಮ್ಮನ್ನು ಕ್ಷಮಿಸಲಿ ಎಂದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel