ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಎಡಿಜಿಪಿ ಚಂದ್ರಶೇಖರ್ ಅವಹೇಳನಕಾರಿಯಾಗಿ ಪತ್ರ ಬರೆದಿದ್ದಾರೆ. ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದ ಆಗ್ರಹಿಸಿ ಹಾಸನದಲ್ಲಿ ಜೆಡಿಎಸ್ ವತಿಯಿಂದ ಪ್ರತಿಭಟನೆ ನಡೆಯಿತು.
ಹಾಸನದ ಹೇಮಾವತಿ ಪ್ರತಿಮೆ ಬಳಿಯಿಂದ ಪ್ರತಿಭಟನೆ ಆರಂಭವಾಗಿ ಜಿಲ್ಲಾಧಿಕಾರಿ ಕಚೇರಿವರೆಗೂ ಸಾಗಿತು. ಈ ವೇಲೆ ಎಡಿಜಿಪಿ ಚಂದ್ರಶೇಖರ್ ರನ್ನು ಕೂಡಲೇ ಅಮಾನತು ಮಾಡಬೇಕೆಂದು ಆಗ್ರಹಿಸಲಾಯಿತು. ಪ್ರತಿಭಟನೆಯಲ್ಲಿ ನೂರಾರು ಜೆಡಿಎಸ್ ಕಾರ್ಯಕರ್ತರು ಭಾಗಿಯಾಗಿದ್ದರು. ಶಾಸಕರಾದ ಎ.ಮಂಜು, ಸಿ.ಎನ್. ಬಾಲಕೃಷ್ಣ, ಸ್ವರೂಪ್ ಪ್ರಕಾಶ್, ಮಾಜಿ ಶಾಸಕರಾದ ಹೆಚ್.ಕೆ. ಕುಮಾರಸ್ವಾಮಿ, ಕೆ.ಎಸ್. ಲಿಂಗೇಶ್ ಸೇರಿದಂತೆ ಹಲವರು ಇದ್ದರು.