ಸಿದ್ದರಾಮಯ್ಯ ಕೋಟೆಯಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾದ ಜೆಡಿಎಸ್
ಮೈಸೂರು : ಮೈಸೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರ್ಯವಾಗಿ ಸ್ಪರ್ಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಪಾಲಿಕೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ನಾವು ಸ್ವತಂತ್ರವಾಗಿ ಸ್ಪರ್ಧಿಸಲಿದ್ದೇವೆ.
ಕಾಂಗ್ರೆಸ್ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಕಾಂಗ್ರೆಸ್ ಜೊತೆಗಿನ ಮೈತ್ರಿ ಮುರಿದು ಬೀಳಲು ಸಿದ್ದರಾಮಯ್ಯಯವರೇ ನೇರ ಹೊಣೆ ಎಂದು ಆರೋಪಿಸಿದರು.
ಸಿದ್ದರಾಮಯ್ಯನವರು ಜೆಡಿಎಸ್ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ. ಪದೇ ಪದೇ ನಮ್ಮ ಪಕ್ಷವನ್ನು ಕೆಣಕುವ ಹೇಳಿಕೆ ನೀಡಿದ್ದಾರೆ. ಜೆಡಿಎಸ್ ಒಂದು ಪಕ್ಷವೇ ಅಲ್ಲ ಎಂದೆಲ್ಲ ಹೇಳುತ್ತಿದ್ದಾರೆ.
ಹಾಗಾಗಿ ಜೆಡಿಎಸ್ ಶಕ್ತಿಯನ್ನು ತೋರಿಸುವ ನಿಟ್ಟಿನಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇವೆ. ಈ ಮೂಲಕ ಸಿದ್ದರಾಮಯ್ಯನವರಿಗೆ ಮನವರಿಕೆ ಮಾಡಿಕೊಡಬೇಕಿದೆ ಎಂದು ಸಿದ್ದರಾಮಯ್ಯ ವಿರುದ್ಧ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದರು.
ಇದೇ ವೇಳೆ ಡಿ.ಕೆ.ಶಿವಕುಮಾರ್ ಬಗ್ಗೆ ಮಾತನಾಡಿ, ಡಿಕೆಶಿವಕುಮಾರ್ ನನ್ನ ಜೊತೆ ಮಾತನಾಡಲು ಸಿದ್ದರಾಮಯ್ಯ ಬಿಡುತ್ತಿಲ್ಲ. ಅವರು ನನ್ನೊಂದಿಗೆ ಮಾತನಾಡದಂತೆ ಡಿಕೆಶಿ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ತಿಳಿಸಿದರು.
