JDS | ಜೆಡಿಎಸ್ ಶಾಸಕರಲ್ಲಿ ಸಿದ್ದರಾಮಯ್ಯ ವಿಶೇಷ ವಿನಂತಿ
ಬೆಂಗಳೂರು : ಪ್ರಜಾಪ್ರತಿನಿಧಿಗಳೆಲ್ಲರೂ ಪ್ರಭುಗಳಾದ ಪ್ರಜೆಗಳ ಆತ್ಮಸಾಕ್ಷಿಗೆ ದನಿಯಾಗಬೇಕಾಗಿರುವುದು ಕರ್ತವ್ಯವಾಗಿದೆ. ಈ ಆತ್ಮಸಾಕ್ಷಿಯ ಮತವನ್ನು ಜಾತ್ಯತೀತತೆಗೆ ಬದ್ಧವಾಗಿರುವ ನಮ್ಮ ಪಕ್ಷದ ಮನ್ಸೂರ್ ಅಲಿ ಖಾನ್ ಅವರಿಗೆ ಚಲಾಯಿಸಬೇಕೆಂದು ಜೆಡಿಎಸ್ ಶಾಸಕರಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಿನಂತಿ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಪತ್ರ ಬರೆದು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಎರಡನೇ ಅಭ್ಯರ್ಥಿಯಾಗಿರುವ ಮನ್ಸೂರ್ ಅಲಿ ಖಾನ್ ಅವರ ಸೋಲು-ಗೆಲುವನ್ನು ರಾಜ್ಯದ ಅಲ್ಪಸಂಖ್ಯಾತ ಸಮುದಾಯ ಮಾತ್ರವಲ್ಲ ಜಾತ್ಯತೀತತೆಯ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಪ್ರಜೆಯೂ ಕುತೂಹಲದಿಂದ ಗಮನಿಸುತ್ತಿದ್ದಾರೆ.

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮನ್ಸೂರು ಅಲಿ ಖಾನ್ ಅವರ ಗೆಲುವು ಯಾವುದೇ ಒಂದು ಪಕ್ಷದ ಗೆಲುವಾಗದೆ ಜಾತ್ಯತೀತ ಸಿದ್ದಾಂತದ ಮೇಲೆ ನಂಬಿಕೆ ಇಟ್ಟಿರುವ ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾದಳ ಪಕ್ಷಗಳೆರಡರ ಸೈದ್ದಾಂತಿಕ ಗೆಲುವಾಗುತ್ತದೆ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.







