ADVERTISEMENT
Saturday, April 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಅಹಿಂದ ಹರಿಕಾರನಿಗೆ ಇತಿಹಾಸ ಪಾಠ ಮಾಡಿದ ದೇವೇಗೌಡರು: ಸ್ಥಳೀಯ ಕಣದಲ್ಲಿ ಕಮಲ ದಳ ಮೈತ್ರಿ ಅಸಾಧ್ಯವೆಂದು ಸ್ಪಷ್ಟಪಡಿಸಿದ ಜೆಡಿಎಸ್ ಸುಪ್ರೀಂ

JDS Supreme Court clarifies that Kamal Dal alliance is impossible in local arena

Shwetha by Shwetha
December 27, 2025
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

ಬೆಂಗಳೂರು: ರಾಜ್ಯ ರಾಜಕೀಯದ ಭೀಷ್ಮ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಇಳಿ ವಯಸ್ಸಿನಲ್ಲಿಯೂ ಪಕ್ಷ ಸಂಘಟನೆಗೆ ರಣಕಹಳೆ ಊದಿದ್ದಾರೆ. ಪತ್ರಿಕಾಗೋಷ್ಠಿ ನಡೆಸಿ ರಾಜ್ಯ ರಾಜಕೀಯದ ವಿದ್ಯಮಾನಗಳ ಬಗ್ಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಹಿಂದ ರಾಜಕಾರಣದ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದ್ದಲ್ಲದೆ, ಬಿಜೆಪಿಯೊಂದಿಗಿನ ಮೈತ್ರಿ ವಿಚಾರದಲ್ಲಿ ಮಹತ್ವದ ಸ್ಪಷ್ಟನೆಯನ್ನು ನೀಡಿದ್ದಾರೆ.

ಅಹಿಂದ ನಾಯಕತ್ವದ ವಿರುದ್ಧ ದೊಡ್ಡಗೌಡರ ಚಾಟಿ

Related posts

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

April 3, 2026
ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

April 3, 2026

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೈಸೂರಿನಲ್ಲಿ ಅಹಿಂದ ಸಮಾವೇಶದ ಮೂಲಕ ಶಕ್ತಿ ಪ್ರದರ್ಶನಕ್ಕೆ ಮುಂದಾಗಿರುವ ಬೆನ್ನಲ್ಲೇ, ಜೆಡಿಎಸ್ ವರಿಷ್ಠರು ಸಿದ್ದರಾಮಯ್ಯನವರ ರಾಜಕೀಯ ನಡೆಗಳ ವಿರುದ್ಧ ಹರಿಹಾಯ್ದಿದ್ದಾರೆ. ಅಹಿಂದದ ವ್ಯಾಖ್ಯಾನ ಮಾಡುವುದು ಕಷ್ಟ ಎಂದು ವ್ಯಂಗ್ಯವಾಡಿರುವ ಗೌಡರು, ಈ ರಾಜ್ಯದಲ್ಲಿ ಹಿಂದುಳಿದವರಿಗೆ ಹಾಗೂ ಅಲ್ಪಸಂಖ್ಯಾತರಿಗೆ ನಿಜವಾದ ಮೀಸಲಾತಿ ತಂದುಕೊಟ್ಟಿದ್ದು ಯಾರು ಎಂದು ಪ್ರಶ್ನಿಸಿದ್ದಾರೆ.

ನಗರಸಭೆ ಮತ್ತು ಮಹಾನಗರ ಪಾಲಿಕೆಗಳಲ್ಲಿ ಮುಸ್ಲಿಂ ಮೀಸಲಾತಿಯನ್ನು ಇಡೀ ದೇಶದಲ್ಲೇ ಜಾರಿಗೆ ತಂದ ಕೀರ್ತಿ, ಮಹಿಳೆಯರಿಗೆ ಮೀಸಲಾತಿ ಕಲ್ಪಿಸಿದ ಇತಿಹಾಸ ಹಾಗೂ ನಾಯಕ ಸಮುದಾಯಕ್ಕೆ ರಿಸರ್ವೇಷನ್ ನೀಡಿದ ಶ್ರೇಯಸ್ಸು ಜೆಡಿಎಸ್ ಮತ್ತು ಜನತಾದಳದ ಆಡಳಿತಕ್ಕೆ ಸಲ್ಲುತ್ತದೆ. ಅಂದು ಜೆ.ಹೆಚ್. ಪಟೇಲರು ಮುಖ್ಯಮಂತ್ರಿಯಾಗಿದ್ದಾಗ, ಸಿದ್ದರಾಮಯ್ಯ ಉಪಮುಖ್ಯಮಂತ್ರಿಯಾಗಿದ್ದರು. ಆದರೆ ಇಂದು ಅಹಿಂದ ಹೆಸರಿನಲ್ಲಿ ರಾಜಕೀಯ ಮಾಡುತ್ತಿರುವುದು ವಿಪರ್ಯಾಸ ಎಂದು ಗೌಡರು ಟೀಕಿಸಿದ್ದಾರೆ.

ಕ್ಷೇತ್ರ ಹುಡುಕಾಟದ ಬಗ್ಗೆ ವ್ಯಂಗ್ಯವಾಡಿದ ಜೆಡಿಎಸ್ ವರಿಷ್ಠ

ಸಿದ್ದರಾಮಯ್ಯನವರ ಕ್ಷೇತ್ರ ಆಯ್ಕೆಯ ಗೊಂದಲದ ಬಗ್ಗೆ ದೇವೇಗೌಡರು ಕಟುವಾದ ಶಬ್ದಗಳಲ್ಲಿ ಟೀಕಿಸಿದ್ದಾರೆ. ನೀವು ನಿಜವಾಗಿಯೂ ಅಹಿಂದ ನಾಯಕರಾಗಿದ್ದರೆ ರಾಜ್ಯದ ಯಾವುದೇ ಮೂಲೆಯಲ್ಲಿ ಸ್ಪರ್ಧಿಸಿ ಗೆಲ್ಲುವ ತಾಕತ್ತು ಇರಬೇಕಿತ್ತು. ಬಾದಾಮಿಯಲ್ಲಿ ಸ್ಪರ್ಧಿಸಿದಿರಿ, ನಂತರ ಕೋಲಾರವೋ ಅಥವಾ ಮೈಸೂರೋ ಎಂಬ ಗೊಂದಲದಲ್ಲಿ ಬಿದ್ದಿರಿ. ಅಂತಿಮವಾಗಿ ಸ್ವಂತ ಮಗನ ಕ್ಷೇತ್ರವನ್ನೇ ಖಾಲಿ ಮಾಡಿಸಿ ಅಲ್ಲಿ ನಿಲ್ಲುವ ಪರಿಸ್ಥಿತಿ ಬಂತು. ಇದು ಅಹಿಂದ ನಾಯಕನ ಲಕ್ಷಣವೇ ಎಂದು ದೇವೇಗೌಡರು ಪ್ರಶ್ನಿಸಿದ್ದಾರೆ.

ತಾವು ರಾಮನಗರದಂತಹ ಒಕ್ಕಲಿಗ ಬೆಲ್ಟ್ ನಲ್ಲಿ ಕುರುಬ ಸಮುದಾಯದ ನಾಯಕರನ್ನು ಎಂಎಲ್ ಸಿ ಮಾಡಿದ್ದನ್ನು ಸ್ಮರಿಸಿದ ಗೌಡರು, ಸಿದ್ದರಾಮಯ್ಯನವರು ಕೇವಲ ರಾಜಕೀಯ ಲಾಭಕ್ಕಾಗಿ ಅಹಿಂದ ಕಾರ್ಡ್ ಬಳಸುತ್ತಿದ್ದಾರೆ ಎಂದು ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯರ ಏಳಿಗೆಗೆ ನಾನೇ ಕಾರಣ ಎಂದ ಗೌಡರು

ಸಿದ್ದರಾಮಯ್ಯನವರ ರಾಜಕೀಯ ಬೆಳವಣಿಗೆಗೆ ತಾವು ನೀಡಿದ ಪ್ರೋತ್ಸಾಹವನ್ನು ದೇವೇಗೌಡರು ಇದೇ ವೇಳೆ ಸ್ಮರಿಸಿಕೊಂಡರು. ಸಿದ್ದರಾಮಯ್ಯನವರ ಕಿರಿಯ ಪುತ್ರನ ನಿಧನದ ನಂತರ, ಅವರ ಎರಡನೇ ಪುತ್ರನನ್ನು ರಾಜಕೀಯಕ್ಕೆ ಕರೆತರುವಂತೆ ಸಲಹೆ ನೀಡಿದ್ದೇ ತಾನು ಎಂದು ಹೇಳಿದರು. ಸಿದ್ದರಾಮಯ್ಯ ಎಷ್ಟೇ ಟೀಕೆ ಮಾಡಿದರೂ, ತಾವು ಪಕ್ಷ ಕಟ್ಟುವ ಕಾಯಕವನ್ನು ಬಿಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಸ್ಥಳೀಯ ಸಂಸ್ಥೆಗಳಲ್ಲಿ ಮೈತ್ರಿ ಕಷ್ಟ: ಮೈತ್ರಿ ಧರ್ಮಕ್ಕೆ ಅಪಸ್ವರ

ಒಂದೆಡೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಗೌಡರು, ಇದೇ ವೇಳೆ ಬಿಜೆಪಿಯೊಂದಿಗಿನ ಮೈತ್ರಿ ವಿಚಾರದಲ್ಲಿ ವಾಸ್ತವವನ್ನು ತೆರೆದಿಟ್ಟರು. ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಮೈತ್ರಿ ಮಾಡಿಕೊಳ್ಳುವುದು ಸಾಧ್ಯ ಮತ್ತು ಅದು ಯಶಸ್ವಿಯಾಗಿದೆ. ಆದರೆ, ಗ್ರಾಮ ಮಟ್ಟದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾರ್ಯಕರ್ತರ ಹಂತದಲ್ಲಿ ಹೊಂದಾಣಿಕೆ ಮಾಡಿಕೊಳ್ಳುವುದು ಅತ್ಯಂತ ಕಷ್ಟದ ಕೆಲಸ ಎಂದು ಅವರು ಅಭಿಪ್ರಾಯಪಟ್ಟರು.

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ ಕಷ್ಟಸಾಧ್ಯ ಎಂದು ನೇರವಾಗಿ ಹೇಳುವ ಮೂಲಕ, ಮುಂದಿನ ತಾಲೂಕು ಮತ್ತು ಜಿಲ್ಲಾ ಮಟ್ಟದ ಚುನಾವಣೆಗಳಲ್ಲಿ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸುವ ಸೂಚನೆ ನೀಡಿದ್ದಾರೆ. ಇದೇ ವೇಳೆ ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ನಾಲ್ಕು ಸ್ಥಾನಗಳ ಪೈಕಿ ಜೆಡಿಎಸ್ ಗೆ ಒಂದು ಸ್ಥಾನ ನೀಡುವ ಬಗ್ಗೆ ಪ್ರಾಥಮಿಕ ಮಾತುಕತೆ ನಡೆದಿದೆ ಎಂದು ಮಾಹಿತಿ ನೀಡಿದರು.

ದೇವೇಗೌಡರು ತಮ್ಮ ಪತ್ರಿಕಾಗೋಷ್ಠಿಯ ಮೂಲಕ ಏಕಕಾಲದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಅಹಿಂದ ಅಸ್ತ್ರವನ್ನು ಮೊಂಡು ಮಾಡಲು ಯತ್ನಿಸಿದರೆ, ಮತ್ತೊಂದೆಡೆ ಮೈತ್ರಿ ಧರ್ಮದ ಇತಿಮಿತಿಗಳ ಬಗ್ಗೆಯೂ ಮಿತ್ರಪಕ್ಷ ಬಿಜೆಪಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ShareTweetSendShare
Join us on:

Related Posts

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

ನಗದು ವ್ಯವಹಾರ ಮಾಡುವವರಿಗೆ ಬಿಗ್ ಶಾಕ್ ಇನ್ಮುಂದೆ ಈ ಮಿತಿ ಮೀರಿದರೆ ಬೀಳಲಿದೆ ಶೇಕಡಾ 100 ರಷ್ಟು ದಂಡ

by Shwetha
April 3, 2026
0

ಏಪ್ರಿಲ್ 1 ರಿಂದ ದೇಶಾದ್ಯಂತ ಆದಾಯ ತೆರಿಗೆ ಇಲಾಖೆಯ ನಿಯಮಗಳಲ್ಲಿ ಭಾರಿ ಬದಲಾವಣೆ ತರಲಾಗಿದೆ. 64 ವರ್ಷಗಳ ಹಳೆಯ ಕಾನೂನಿಗೆ ಮೇಜರ್ ಸರ್ಜರಿ ಮಾಡಲಾಗಿದ್ದು ಕಪ್ಪು ಹಣದ...

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

ಕ್ರೈಸ್ತ ಸಂಪ್ರದಾಯದಂತೆ ಅಂತ್ಯಕ್ರಿಯೆ : ನಾನು ನಾಸ್ತಿಕನಿರಬಹುದು ಆದರೆ ನನ್ನ ತಾಯಿಯ ನಂಬಿಕೆಯನ್ನು ಪ್ರಶ್ನಿಸಲು ನಾನ್ಯಾರು ಟೀಕಿಸಿದ ವಿಕೃತ ಮನಸ್ಸುಗಳಿಗೆ ಪ್ರಕಾಶ್ ರಾಜ್ ಖಡಕ್ ತಿರುಗೇಟು

by Shwetha
April 3, 2026
0

ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಸದ್ಯ ತಮ್ಮ ತಾಯಿಯನ್ನು ಕಳೆದುಕೊಂಡ ದುಃಖದಲ್ಲಿದ್ದಾರೆ. ಆದರೆ, ಈ ಸೂತಕದ ಮನೆಯಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಟೀಕೆಗಳನ್ನು ಮಾಡುತ್ತಿರುವುದು ವಿವಾದಕ್ಕೆ...

ಶಾಂತಿ ದಲ್ಲಾಳಿಯಾಗಲು ಹೊರಟ ಪಾಕಿಸ್ತಾನಕ್ಕೆ ಕತಾರ್‌ನಿಂದ ತೀವ್ರ ಮುಖಭಂಗ: ಉಗ್ರರ ನಾಡಿಗೆ ವೀಸಾ ಬ್ಯಾನ್ ಭಾರತಕ್ಕೆ ರಾಜಮರ್ಯಾದೆ

ಶಾಂತಿ ದಲ್ಲಾಳಿಯಾಗಲು ಹೊರಟ ಪಾಕಿಸ್ತಾನಕ್ಕೆ ಕತಾರ್‌ನಿಂದ ತೀವ್ರ ಮುಖಭಂಗ: ಉಗ್ರರ ನಾಡಿಗೆ ವೀಸಾ ಬ್ಯಾನ್ ಭಾರತಕ್ಕೆ ರಾಜಮರ್ಯಾದೆ

by Shwetha
April 3, 2026
0

ಜಾಗತಿಕ ಮಟ್ಟದಲ್ಲಿ ಪಾಕಿಸ್ತಾನಕ್ಕೆ ಮತ್ತೊಮ್ಮೆ ತೀವ್ರ ಮುಖಭಂಗವಾಗಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಉದ್ವಿಗ್ನತೆಯ ನಡುವೆ ಶಾಂತಿ ದಲ್ಲಾಳಿಯಂತೆ ವರ್ತಿಸಲು ಮುಂದಾದ ಪಾಕಿಸ್ತಾನಕ್ಕೆ ಪಶ್ಚಿಮ ಏಷ್ಯಾದ ಪ್ರಬಲ ರಾಷ್ಟ್ರ...

ಪೊಲೀಸರು 24 ಗಂಟೆಯೂ ಕರ್ತವ್ಯಪ್ರಜ್ಞೆಯಿಂದ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ

ಪೊಲೀಸರು 24 ಗಂಟೆಯೂ ಕರ್ತವ್ಯಪ್ರಜ್ಞೆಯಿಂದ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ

by Shwetha
April 3, 2026
0

ರಾಜ್ಯದಲ್ಲಿ ಸೈಬರ್ ಅಪರಾಧ ಸೇರಿದಂತೆ ಹಲವು ರೀತಿಯ ಅಪರಾಧಗಳ ಪ್ರಮಾಣ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಿರುವ ಹಿನ್ನೆಲೆಯಲ್ಲಿ, ಅವನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಲು ಪೊಲೀಸರನ್ನು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಕೋರಮಂಗಲದಲ್ಲಿ...

ಹೃದಯವಿದ್ರಾವಕ ಘಟನೆ: 11 ತಿಂಗಳ ಮಗು ಸಾವು, ತಾಯಿಯ ಆತ್ಮಹತ್ಯೆ

ಹೃದಯವಿದ್ರಾವಕ ಘಟನೆ: 11 ತಿಂಗಳ ಮಗು ಸಾವು, ತಾಯಿಯ ಆತ್ಮಹತ್ಯೆ

by Shwetha
April 3, 2026
0

ಮನ ಕಲುಕುವ ಘಟನೆ ಬೆಂಗಳೂರು ನಗರದಲ್ಲಿ ಸಂಭವಿಸಿದೆ. ಬಕೆಟ್‌ನಲ್ಲಿದ್ದ ನೀರಿನಲ್ಲಿ ಮುಳುಗಿ 11 ತಿಂಗಳ ಮಗು ಸಾವನ್ನಪ್ಪಿದ ದುರ್ಘಟನೆ ನಡೆದಿದ್ದು, ಈ ದುಃಖವನ್ನು ಸಹಿಸಲಾರದೆ ತಾಯಿ ಆತ್ಮಹತ್ಯೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram