2023ರ ಚುನಾವಣೆಗೆ ಶೀಘ್ರದಲ್ಲೇ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ JDS saaksha tv
ಬೆಂಗಳೂರು : ಮುಂದಿನ ಸಾರ್ವತ್ರಿಕ ಚುನಾವಣೆಗೆ ಜೆಡಿಎಸ್ ಪಕ್ಷ ಈಗಾಗಲೇ ತಯಾರಿ ಆರಂಭಿಸಿದೆ.
ಈ ಮಧ್ಯೆ 2023ರ ಸಾರ್ವತ್ರಿಕ ಚುನಾವಣೆಗೆ ಶೀಘ್ರದಲ್ಲೇ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರು ನಗರದ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ಎರಡನೇ ಹಂತದ ಜನತಾ ಸಂಗಮ ಸಂಘಟನಾ ಕಾರ್ಯಗಾರ ನಡೆಯುತ್ತಿದೆ.
ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ಈಗಾಗಲೇ ಸಭೆಗಳನ್ನು ನಡೆಸಲಾಗಿದೆ.
ಸಮರ್ಥವಾದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಶೀಘ್ರದಲ್ಲೇ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಲಾಗುವುದು ಎಂದು ತಿಳಿಸಿದರು.
ಇದೇ ವೇಳೆ ಪರಿಷತ್ ಚುನಾವಣೆ ಬಗ್ಗೆ ಪ್ರತಿಕ್ರಿಯೆ ನೀಡಿ, ಇಂದು ಸಂಜೆ ಬಿಡದಿಯ ತೋಟದಲ್ಲಿ ನಮ್ಮ ಪಕ್ಷದ ಪ್ರಮುಖ ನಾಯಕರ ಸಭೆ ಕರೆಯಲಾಗಿದೆ.
ಈ ವೇಳೆ ಪರಿಷತ್ ಚುನಾವಣೆ ಸಂಬಂಧ ಚರ್ಚೆ ಮಾಡಲಾಗುವುದು ಎಂದು ಕುಮಾರಸ್ವಾಮಿ ಮಾಹಿತಿ ನೀಡಿದರು.









