JDS vs BJP | ಬಿಜೆಪಿಯನ್ನು ಉಳಿಸಿದವರೇ ಕುಮಾರಸ್ವಾಮಿ

1 min read
kumaraswamy - saakshatv

JDS vs BJP | ಬಿಜೆಪಿಯನ್ನು ಉಳಿಸಿದವರೇ ಕುಮಾರಸ್ವಾಮಿ

ಬೆಂಗಳೂರು :  ಅಧಿಕಾರಕ್ಕಾಗಿ ಯಡಿಯೂರಪ್ಪನವರೇ ಬಿಜೆಪಿ ಬಿಡಲು ಸಿದ್ಧರಿದ್ದರು. ಮಂತ್ರಿಯಾದರೆ ಸಾಕಪ್ಪಾ ಎಂದು ಕುಮಾರಣ್ಣನ ಮನೆ ಕದತಟ್ಟಿದ್ದರು. ಆದರೆ, ತಾಯಿಯಂಥ ಪಕ್ಷ ಬಿಡಬೇಡಿ ಎಂದು ಸಲಹೆ ನೀಡಿದ್ದರು ಹೆಚ್ಡಿಕೆ. ಅವರಿಗೆ ಪಕ್ಷ ಬಿಡಿ ಎಂದಿದ್ದರೆ ಆವತ್ತೇ ಕರ್ನಾಟಕದಲ್ಲಿ ಬಿಜೆಪಿ ಸಮಾಧಿ ಆಗುತ್ತಿತ್ತು. ಬಿಜೆಪಿಯನ್ನು ಉಳಿಸಿದವರೇ ಕುಮಾರಸ್ವಾಮಿ ಎಂದು ರಾಜ್ಯ ಬಿಜೆಪಿ ವಿರುದ್ಧ ಜೆಡಿಎಸ್ ಕಿಡಿಕಾರಿದೆ.

ಹಲಾಲ್ ವಿಚಾರವಾಗಿ ಹೆಚ್ ಡಿ ಕುಮಾರಸ್ವಾಮಿ, ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದರು. ಈ ಕಾರಣಕ್ಕಾಗಿ ರಾಜ್ಯ ಬಿಜೆಪಿ ಟ್ವಿಟ್ಟರ್ ನಲ್ಲಿ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದೆ.

ಇದೀಗ ಬಿಜೆಪಿ ಟ್ವೀಟ್ ಗಳಿಗೆ ಜೆಡಿಎಸ್ ಟ್ವಿಟ್ಟರ್ ನಲ್ಲಿ ತಿರುಗೇಟು ನೀಡಿದೆ.

ಜೆಡಿಎಸ್ ತನ್ನ ಟ್ವೀಟ್ಟರ್ ನಲ್ಲಿ…

ಸ್ವಯಂಘೋಷಿತ ದೇಶಭಕ್ತ  @BJP4Karnataka ಪಕ್ಷವೇ.. ಕುರ್ಚಿಗಾಗಿ ಹೆಚ್.ಡಿ.ಕುಮಾರಸ್ವಾಮಿ ಅವರು ನಿಮ್ಮ ಯಾವ ಮುಖಂಡರ ಮನೆ ಬಾಗಿಲಿಗೂ ಬರಲಿಲ್ಲ. ಅಧಿಕಾರಕ್ಕಾಗಿ ಅವರ ಮನೆ ಬಾಗಿಲಿಗೇ ಬಂದರು ನಿಮ್ಮವರು! ನೆನಪಿರಲಿ.

9 ದಿನ ಸಿಎಂ ಆಗಿದ್ದ ಯಡಿಯೂರಪ್ಪಗೆ ಬೆಂಬಲ ಕೊಟ್ಟಿದ್ದು ಇದೇ ಕುಮಾರಸ್ವಾಮಿ. ಆಗ ನಿಮ್ಮ ಹೈಕಮಾಂಡ್, ʼಅಗ್ರಿಮೆಂಟ್ ಹೈ ಡ್ರಾಮಾʼ ಆಡಿ ಯಡಿಯೂರಪ್ಪ ಬೆನ್ನಿಗೆ ತಿವಿದದ್ದು ಗೊತ್ತಿಲ್ಲವಾ? ಕೊನೆಗೆ ಅಗ್ರಿಮೆಂಟನ್ನೇ ಹೈಜಾಕ್ ಮಾಡಿ ವಚನಭ್ರಷ್ಟರಾಗಿದ್ದು ನೀವು. ಅದನ್ನು ಕುಮಾರಸ್ವಾಮಿ ತಲೆಗೆ ಕಟ್ಟಿದಿರಿ. ಸತ್ಯ ಮರೆತರೆ ಹೇಗೆ?

jds-vs-bjp- twitter war h d kumaraswamy saaksha tv

ಕೃತಜ್ಞತೆ ಎನ್ನುವುದು ನಿಮಗೆ ಆಗದ ಪದ. ಯಾರು ಶಕ್ತಿ ತುಂಬುತ್ತಾರೋ ಅವರ ಕತ್ತು ಕುಯ್ಯುವುದು ನಿಮ್ಮ ಜಾಯಮಾನ. 2006ರಲ್ಲಿ ಸರಕಾರ ರಚನೆಯಾದ ಎರಡೇ ತಿಂಗಳಿಗೆ ಕುಮಾರಸ್ವಾಮಿ ವಿರುದ್ಧ ಸಲ್ಲದ ಸುಳ್ಳು ಆರೋಪ ಮಾಡಿ ಬೆನ್ನಿಗಿರಿದದ್ದು ಯಾರು? ಬಿಜೆಪಿಯ ʼಬ್ರೂಟಸ್ ಪಾಲಿಟಿಕ್ಸ್ʼ ಅಲ್ಲವೇ ಅದು?

ಉಪ ಸಭಾಪತಿ ವಿಷಯಕ್ಕೆ ಬಂದರೆ, ಈ ಸ್ಥಾನಕ್ಕೂ ಕುಮಾರಣ್ಣಗೂ ಸಂಬಂಧವೇ ಇಲ್ಲ. ಆ ಪದವಿ ಆಕಾಂಕ್ಷಿ ಆಗಿದ್ದವರು ಮೂಲತಃ ಜನತಾ ಪರಿವಾರದವರು. ಅವರನ್ನು ಕಾಂಗ್ರೆಸ್ ನಂಬಿಸಿ, ವಂಚಿಸಿತ್ತು. ಅವರಿಗೆ ಜೆಡಿಎಸ್ ಪಕ್ಷ ಆಶ್ರಯ ಕೊಟ್ಟು ಶಕ್ತಿ ತುಂಬಿತು. ಇದರಲ್ಲಿ ಸರ್ಕಸ್ ಪ್ರಶ್ನೆ ಎಲ್ಲಿಂದ ಬಂತು ಎಂದು ಪ್ರಶ್ನಿಸಿದೆ.

jds-vs-bjp- twitter war h d kumaraswamy

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd