ಜೆಇಎಂ ಭಯೋತ್ಪಾದಕನ ಹತ್ಯೆ, ಒಬ್ಬ ಪೊಲೀಸ್ ಹುತಾತ್ಮ Saaksha_tv
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಪರಿವಾನ್ ಪ್ರದೇಶದಲ್ಲಿ ಬುಧವಾರ ರಾತ್ರಿ ಪೊಲೀಸರು ಮತ್ತು ಯೋಧರು ಜಂಟಿಯಾಗಿ ನಡೆಸಿದ ಎನ್ಕೌಂಟರ್ನಲ್ಲಿ ಜೈಶ್-ಎ-ಮೊಹಮ್ಮದ್ (ಜೆಇಎಂ) ಭಯೋತ್ಪಾದಕನ್ನು ಹತ್ಯೆ ಮಾಡಿದ್ದಾರೆ. ಈ ಪ್ರದೇಶದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಲಾಗಿತ್ತು.
ಈ ಕಾರ್ಯಾಚರಣೆಯಲ್ಲಿ ಒಬ್ಬ ಪೊಲೀಸ್ ಹುತಾತ್ಮರಾಗಿದ್ದು, ಮೂವರು ಯೋಧರು ಸೇರಿದಂತೆ ಐವರು ಗಾಯಗೊಂಡಿದ್ದಾರೆ ಹಾಗೇ ಎನ್ಕೌಂಟರ್ನಲ್ಲಿ ಇಬ್ಬರು ನಾಗರಿಕರಿಗೂ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
“ಒಬ್ಬ ಪೊಲೀಸ್ ಸಿಬ್ಬಂದಿ Sg Ct ರೋಹಿತ್ ಛಿಬ್ ಹುತಾತ್ಮರಾದರು, ಮೂವರು ಸೇನಾ ಯೋಧರು ಗಾಯಗೊಂಡಿದ್ದಾರೆ. ಇಬ್ಬರು ನಾಗರಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಭಯೋತ್ಪಾದಕ ಸಂಘಟನೆಯ ಜೆಎಂನ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಯಿತು. ಕಾರ್ಯಾಚರಣೆ ಮುಂದುವರೆದಿದೆ” ಎಂದು ಕಾಶ್ಮೀರ ವಲಯ ಪೊಲೀಸ್ ಟ್ವೀಟ್ ಮಾಡಿದ್ದಾರೆ.