ರಾಂಚಿ: ಕೊರೊನಾ ಸೋಂಕಿತ ಸಚಿವರೊಬ್ಬರನ್ನು ಭೇಟಿ ಮಾಡಿದ ಹಿನ್ನೆಲೆಯಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಸ್ವಯಂ ಹೋಮ್ ಕ್ವಾರಂಟೈನ್‍ಗೆ ಒಳಗಾಗಿದ್ದಾರೆ.
ನೀರು ಸರಬರಾಜು ಹಾಗೂ ಒಳಚರಂಡಿ ಇಲಾಖೆ ಖಾತೆ ಸಚಿವ ಮಿಥಿಲೇಶ್ ಠಾಕೂರ್‍ರನ್ನು ಇತ್ತೀಚೆಗೆ ಮುಖ್ಯಮಂತ್ರಿ ಹೇಮಂತ್ ಸೊರೇನ್ ಭೇಟಿ ಮಾಡಿ ಮಾತುಕತೆ ನಡೆಸಿದ್ದರು.
ಸಿಎಂ ಭೇಟಿಯಾದ ಕೆಲವೇ ದಿನಗಳಲ್ಲಿ ಸಚಿವ ಠಾಕುರ್ ಅವರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ರಾಂಚಿಯ ಮನೆಯಲ್ಲಿ ಹೇಮಂತ್ ಸೊರೇನ್ ಸ್ವಯಂ ಹೋಂ ಕ್ವಾರಂಟೈನ್ ಮಾಡಿಕೊಂಡಿದ್ದಾರೆ. ಹೇಮಂತ್ ಸೊರೇನ್ ಗಂಟಲು ಮಾದರಿಯನ್ನು ಪರೀಕ್ಷೆಗೆ ಕಳಿಸಲಾಗಿದ್ದು, ಇಂದು ಅಥವಾ ನಾಳೆ ವರದಿ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.
ಮುಖ್ಯಮಂತ್ರಿಗಳ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿ ಕೂಡ ಮುನ್ನೆಚ್ಚರಿಕೆ ಕ್ರಮವಾಗಿ ಹೋಂ ಕ್ವಾರಂಟೈನ್‍ಗೆ ಒಳಗಾಗುವಂತೆ ಸೊರೆನ್ ಸೂಚನೆ ನೀಡಿದ್ದಾರೆ.
ಸಚಿವ ಮಿಥಿಲೇಶ್ ಠಾಕೂರ್ ಅಲ್ಲದೆ ಜೆಎಎಂ ಶಾಸಕ ಮಥುರಾ ಮಹತೋ ಅವರಿಗೂ ಕೊರೊನಾ ಪಾಸಿಟಿವ್ ಬಂದಿದೆ. ಇಬ್ಬರೂ ಶೀಘ್ರ ಗುಣಮುಖರಾಗಲಿ ಎಂದು ಸೊರೆನ್ ಹಾರೈಸಿದ್ದಾರೆ.
ಪಾಟ್ನಾ ನಗರ 6 ದಿನ ಲಾಕ್‍ಡೌನ್
ಬಿಹಾರ ರಾಜಧಾನಿ ಪಾಟ್ನಾದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜುಲೈ 10ರಿಂದ 16ರವರೆಗೆ ಸಂಪೂರ್ಣ ಲಾಕ್‍ಡೌನ್‍ಗೆ ಆದೇಶ ನೀಡಲಾಗಿದೆ.
ಈ ಸಂಬಂಧ ರಾಂಜಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.








