ಅತ್ಯಾಚಾರ ಕುರಿತ ಜಾರ್ಖಂಡ್ ಸಿಎಂ ಹೇಳಿಕೆ ತೀವ್ರ ವಿರೋಧ
ರಾಂಚಿ :ಜಾರ್ಖಂಡ್ ನ ಮುಖ್ಯ ಮಂತ್ರಿ ಹೇಮಂತ್ ಸೊರೆನ್ ಅವರ ಅತ್ಯಾಚಾರ ಕುರಿತಾದ ಹೇಳಿಕೆಗೆ ದೇಶದಾದ್ಯಂತ ಭಾರಿ ವ್ಯಕ್ತವಾಗಿದೆ.
ಜಾರ್ಖಂಡ್ ನಲ್ಲಿ ಬುಡಕಟ್ಟು ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಹತ್ಯೆ ಮಾಡಲಾಗಿತ್ತು.
ಈ ಸಂಬಂಧ ಪ್ರತಿಕ್ರಿಯೆ ನೀಡಿದ್ದ ಜಾರ್ಖಂಡ್ ನ ಮುಖ್ಯಮಂತ್ರಿ ಹೇಮಂತ್ ಸೊರೆನ್, ಎಲ್ಲೆಂದರಲ್ಲಿ ಈ ರೀತಿಯ ಘಟನೆಗಳು ನಡೆಯುತ್ತಲೇ ಇವೆ.
ಇಂತಹ ಘಟನೆಗಳು ಯಾವ ರಾಜ್ಯದಲ್ಲಿ ಆಗಿಲ್ಲ ? ಇಂತಹ ಘಟನೆಗಳನ್ನು ಊಹಿಸಲು ಸಾಧ್ಯವಿಲ್ಲ ಎಂದಿದ್ದರು.
ಹೇಮಂತ್ ಸೊರೆನ್ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.

ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಪ್ರತಿಕ್ರಿಯೆ ನೀಡಿದ್ದು, ಬುಡಕಟ್ಟು ಬಾಲಕಿಯ ಸಾವಿಗೆ ಸರ್ಕಾರವೇ ನೇರ ಹೊಣೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿರುವಂತೆ ಕಾಣುತ್ತಿದೆ ಎಂದಿದ್ದಾರೆ.
ಹಿನ್ನೆಲೆ
ಜಾರ್ಖಂಡ್ ನ ದುಮ್ಕಾ ಗ್ರಾಮದಲ್ಲಿ 14 ವರ್ಷದ ಹುಡುಗಿಯು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು.
ಪೊಲೀಸ್ ತನಿಖೆಯಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎಂಬುದು ಬಯಲಾಗಿತ್ತು.