Jharkhand – ಬಾಬಾ ಬೈದ್ಯನಾಥ್ ಗೆ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ…
ರಾಂಚಿ: ಜಾರ್ಖಂಡ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ 16,8000 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದ್ದಾರೆ. 401 ಕೋಟಿ ವೆಚ್ಚದಲ್ಲಿ 673 ಎಕರೆ ಪ್ರದೇಶದಲ್ಲಿ ನಿರ್ಮಿಸಲಾದ ದಿಯೋಘರ್ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದರು.
ಅಲ್ಲದೆ. 12 ಜ್ಯೋತಿರ್ಲಿಂಗಗಳಲ್ಲಿ ಒಂದಾದ ಬಾಬಾ ಬೈದ್ಯನಾಥ್ ದೇವಸ್ಥಾನದಲ್ಲಿ ತೆರಳಿ ಮೋದಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ವೇದಮಂತ್ರಗಳ ನಡುವೆ ರುದ್ರಾಭಿಷೇಕ ನಡೆಯಿತು. ಇದೇ 14ರಿಂದ ಶ್ರಾವಣ ಮೇಳ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಬೈದ್ಯನಾಥನ ದರ್ಶನ ಪಡೆಯಲು ಸಾವಿರಾರು ಭಕ್ತರು ಹಾಗೂ ಯಾತ್ರಾರ್ಥಿಗಳು ಆಗಮಿಸುತ್ತಿದ್ದಾರೆ.
बाबा बैद्यनाथ धाम में दर्शन किए, साथ ही पूजा-अर्चना की। हर हर महादेव! pic.twitter.com/SeY2vDOQVE
— Narendra Modi (@narendramodi) July 12, 2022
ಮಂಗಳವಾರ ಬೆಳಗ್ಗೆ ಜಾರ್ಖಂಡ್‌ನಲ್ಲಿ ಪ್ರಧಾನಿಗೆ ಆತ್ಮೀಯ ಸ್ವಾಗತ ದೊರೆಯಿತು. ರಸ್ತೆಯ ಇಕ್ಕೆಲಗಳಲ್ಲಿ ಸೇರಿದ್ದ ಜನರತ್ತ ಕೈ ಬೀಸುತ್ತ ಪ್ರಧಾನಿ ಮುಂದೆ ಹೋದರು. ನಂತರ ಮೋದಿ ಅವರು ಅಧಿಕೃತವಾಗಿ ದಿಯೋಗರ್ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದರು. ಬಳಿಕ ವಿಮಾನ ನಿಲ್ದಾಣದಿಂದ ಕೋಲ್ಕತ್ತಾಗೆ ಇಂಡಿಗೋ ವಿಮಾನಕ್ಕೂ ಚಾಲನೆ ನೀಡಲಾಯಿತು. ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮೋದಿ ಅವರು 25 ಮೇ 2018 ರಂದು ಈ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ಮಾಡಿದ್ದರು. Modi inaugurated Deogarh airport.. Pujas at Baidyanath temple