Siddaramaiah | ಫ್ಯಾಸಿಸ್ಟ್ ಬುದ್ದಿ.. ಭಾರತದಲ್ಲಿ ಇದು ನಡೆಯದು
ಬೆಂಗಳೂರು : ಗುಜರಾತ್ ಶಾಸಕ ಮತ್ತು ದಲಿತ ಹೋರಾಟಗಾರ ಜಿಗ್ನೇಶ್ ಮೇವಾನಿ ಅವರ ಬಂಧನವನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಖಂಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಸುಳ್ಳು ಆರೋಪದ ಮೇಲೆ ಗುಜರಾತ್ ಶಾಸಕ ಮತ್ತು ದಲಿತ ಹೋರಾಟಗಾರ ಜಿಗ್ನೇಶ್ ಮೇವಾನಿ ಅವರ ಬಂಧನದ ಮೂಲಕ ಬಿಜೆಪಿ ಸರ್ಕಾರ ಅಭಿವ್ಯಕ್ತಿ ಸ್ವಾತಂತ್ರ್ಯದ ಕೊರಳು ಹಿಚುಕಲು ಹೊರಟಿರುವುದು ಅತ್ಯಂತ ಖಂಡನೀಯ.
ರಾಜಕೀಯ ವಿರೋಧಿಗಳನ್ನು ಸೈದ್ಧಾಂತಿಕವಾಗಿ ಎದುರಿಸಲಾಗದೆ ಈ ರೀತಿ ಬಾಯಿಮುಚ್ಚಿಸುವುದು ಸರ್ವಾಧಿಕಾರಿ ಧೋರಣೆ.
ಸುಳ್ಳು ಆರೋಪದ ಮೇಲೆ ಗುಜರಾತ್ ಶಾಸಕ ಮತ್ತು ದಲಿತ ಹೋರಾಟಗಾರ @jigneshmevani80 ಅವರ ಬಂಧನದ ಮೂಲಕ @BJP4India ಸರ್ಕಾರ ಅಭಿವ್ಯಕ್ತಿ ಸ್ವಾತಂತ್ರ್ಯದ ಕೊರಳು ಹಿಚುಕಲು ಹೊರಟಿರುವುದು ಅತ್ಯಂತ ಖಂಡನೀಯ. ರಾಜಕೀಯ ವಿರೋಧಿಗಳನ್ನು ಸೈದ್ಧಾಂತಿಕವಾಗಿ ಎದುರಿಸಲಾಗದೆ ಈ ರೀತಿ ಬಾಯಿಮುಚ್ಚಿಸುವುದು ಸರ್ವಾಧಿಕಾರಿ ಧೋರಣೆ. 1/3#JigneshMevani
— Siddaramaiah (@siddaramaiah) April 25, 2022
ಯಾವುದೇ ಹೇಳಿಕೆಗಳಿಂದ ಯಾರಿಗಾದರೂ ಮಾನ ನಷ್ಟವಾಗಿದ್ದರೆ ಸಂಬಂಧಿತರಿಗೆ ನ್ಯಾಯಾಲಯದಲ್ಲಿ ನ್ಯಾಯ ಕೇಳಲು ಅವಕಾಶ ಇದೆ.
ಇದರ ಬದಲಿಗೆ ಪೊಲೀಸರನ್ನು ದುರುಪಯೋಗಪಡಿಸಿಕೊಂಡು ತಮ್ಮ ರಾಜಕೀಯ ವಿರೋಧಿಗಳನ್ನು ಹಣಿಯಲು ಹೊರಟಿರುವುದು ಫ್ಯಾಸಿಸ್ಟ್ ಬುದ್ದಿ. ಭಾರತದಲ್ಲಿ ಇದು ನಡೆಯದು.
ದೇಶವನ್ನು ಪ್ರೀತಿಸುವ, ಸಂವಿಧಾನದ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬರೂ ಜಿಗ್ನೇಶ್ ಮೇವಾನಿ ಜೊತೆ ಇದ್ದಾರೆ.
https://twitter.com/siddaramaiah/status/1518522644286476288?s=20&t=LVTuQB4FbvwH3_VvlLP4Ag
ಒಬ್ಬ ಜಿಗ್ನೇಶ್ ರನ್ನು ಜೈಲಿಗೆ ಕಳಿಸಿದ್ದೇವೆ ಎಂದು ಬೀಗುವುದು ಬೇಡ, ಈ ಬೆಳವಣಿಗೆಯಿಂದಾಗಿ ದೇಶದ ತುಂಬ ನೂರಾರು ಜಿಗ್ನೇಶರು ಹುಟ್ಟಿಕೊಂಡು ಹೋರಾಟವನ್ನು ಮುಂದುವರಿಸಲಿದ್ದಾರೆ ಎನ್ನುವುದು ನೆನಪಲ್ಲಿರಲಿ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. jignesh mevani arrest siddaramaiah tweet reaction