2021ಕ್ಕೆ ಜಿಯೋ 5ಜಿ ಸೇವೆ ಆರಂಭ
ನವದೆಹಲಿ : 2021 ರ ದ್ವಿತೀಯಾರ್ಧದಲ್ಲಿ ಜಿಯೋ ಭಾರತದಲ್ಲಿ 5ಜಿ ಕ್ರಾಂತಿಯ ಹರಿಕಾರನಾಗಲಿದೆ ಎಂದು ರಿಲಯನ್ಸ್ ಇಂಡಸ್ಟೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ತಿಳಿಸಿದ್ದಾರೆ.
ಇಂಡಿಯನ್ ಮೊಬೈಲ್ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅಂಬಾನಿ, ಡಿಜಿಟಲ್ ಸಂಪರ್ಕ ಹೊಂದಿದ ಅತ್ಯುತ್ತಮ ರಾಷ್ಟ್ರಗಳಲ್ಲಿ ಭಾರತವೂ ಒಂದಾಗಿದೆ.
ಇದನ್ನು ಉಳಿಸಿಕೊಳ್ಳಬೇಕಾದರೇ 5ಜಿ ಜಾರಿಗೆ ಅಗತ್ಯವಾದ ನೀತಿಗಳನ್ನು ವೇಗವಾಗಿ ಜಾರಿಗೊಳಿಸಬೇಕು ಮತ್ತು ಕೈಗೆಟುಕುವ ದರದಲ್ಲಿ ಎಲ್ಲೆಡೆ ಸಿಗಬೇಕು ಎಂದು ಅಭಿಪ್ರಾಪಟ್ಟರು.
ಹಾಗೇ 2021 ರ ದ್ವಿತೀಯಾರ್ಧದಲ್ಲಿ ಜಿಯೋ ಭಾರತದಲ್ಲಿ 5ಜಿ ಕ್ರಾಂತಿಯ ಹರಿಕಾರನಾಗಲಿದೆ ಎಂದು ನಾನು ನಿಮಗೆ ಭರವಸೆ ನೀಡುತ್ತೇನೆ ಎಂದು ಪ್ರಕಟಿಸಿದರು.
ಅಂದಹಾಗೆ ಜಿಯೋ ಈಗಾಗಲೇ 5ಜಿ ಜಾರಿ ಸಂಬಂಧ ವಿವಿಧ ಕಂಪನಿಗಳ ಜೊತೆ ಕೆಲಸ ಮಾಡುತ್ತಿದೆ.
ರಕ್ತದಾನ ಶಿಬಿರದಲ್ಲಿ ಭಾಗವಹಿಸುವವರಿಗೆ ಕೋಳಿ/ ಪನೀರ್ ವಿತರಣೆ
ಇದಲ್ಲದೆ ಜಿಯೋ ಕಡಿಮೆ ಬೆಲೆಯಲ್ಲಿ ಸ್ಮಾರ್ಟ್ಫೋನ್ ನೀಡುವ ಸಂಬಂಧ ಗೂಗಲ್ ಜೊತೆ ಕೆಲಸ ಮಾಡುತ್ತಿದೆ. ಮುಂದಿನ ವರ್ಷ ಈ ಫೋನ್ ಬಿಡುಗಡೆಯಾಗುವ ಸಾಧ್ಯತೆಯಿದ್ದು 4 ಸಾವಿರ ರೂ. ದರ ನಿಗದಿಯಾಗುವ ಸಾಧ್ಯತೆಯಿದೆ.
5ಜಿ ಬಂದರೆ ನಗರ ಪ್ರದೇಶದಲ್ಲಿ 10 ಗಿಗಾ ಬೈಟ್ಸ್ ಪರ್ ಸೆಕೆಂಡ್ ಬ್ರಾಡ್ಬ್ಯಾಂಡ್ ಸಂಪರ್ಕ ಸಿಕ್ಕಿದರೆ, ಗ್ರಾಮಾಂತರ ಪ್ರದೇಶದಲ್ಲಿ 1 ಗಿಗಾ ಬೈಟ್ಸ್ ಪರ್ ಸೆಕೆಂಡ್ ಸಿಗಲಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel