ಪಾಕಿಸ್ತಾನದಿಂದ ಭಾರತಕ್ಕೆ ಕಳ್ಳ ಸಾಗಾಣೆ ಮಾಡುತ್ತಿದ್ದ ಹೆರಾಯಿನ್ ವಶಕ್ಕೆ…
ಜಮ್ಮು: ಪಾಕಿಸ್ತಾನದಿಂದ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 15 ಹೆರಾಯಿನ್ ಪ್ಯಾಕೆಟ್ಗಳನ್ನು ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್ನ ಗಡಿ ನಿಯಂತ್ರಣ ರೇಖೆಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
“ಸೇನೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಇಂದು ಬೆಳಿಗ್ಗೆ ಪೂಂಚ್ ಜಿಲ್ಲೆಯ ಮೆಂಧಾರ್ನ ಬಾಲಕೋಟೆ ಪ್ರದೇಶದ ಬಳಿ 15 ಪ್ಯಾಕೆಟ್ ಹೆರಾಯಿನ್ ಅನ್ನು ವಶಪಡಿಸಿಕೊಂಡಿದ್ದಾರೆ” ಎಂದು ಮೆಂಧರ್ನ ಉಪ ವಿಭಾಗೀಯ ಪೊಲೀಸ್ ಅಧಿಕಾರಿ ಶೆಹಜೀನ್ ಭಟ್ ಹೇಳಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿರುವುದಾಗಿ ಅವರು ತಿಳಿಸಿದ್ದಾರೆ.
ಶುಕ್ರವಾರ, ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ದಿಲ್ಬಾಗ್ ಸಿಂಗ್, ಮಾತನಾಡಿ ಕಳೆದ 2 ವರ್ಷಗಳಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿಯುತ ವಾತಾವರಣದಿಂದ ಕಂಗೆಟ್ಟಿರುವ ಪಾಕಿಸ್ತಾನವು ಹೆಚ್ಚು ಹತಾಶವಾಗಿದೆ. ಭಯೋತ್ಪಾದನೆಗೆ ಹಣ ಮತ್ತು ಉತ್ತೇಜನ ನೀಡಲು ಸಾಧ್ಯವಿರುವ ಎಲ್ಲ ವಿಧಾನಗಳನ್ನ ಪ್ರಯತ್ನಿಸುತ್ತಿದೆ ಎಂದು ಹೇಳಿದರು.








