ಭಯೋತ್ಪಾದಕ ಸಂಘಟನೆ ಜೊತೆ ಸಂಪರ್ಕ ಹೊಂದಿದ್ದವನ ಬಂಧನ – Saaksha Tvc
ಜಮ್ಮು-ಕಾಶ್ಮೀರ: ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಸಂಘಟನೆ ಜೊತೆ ಸಂಪರ್ಕ ಹೊಂದಿದ್ದ ಭಯೋತ್ಪಾದಕ ಸಹಚರನನ್ನು ಭದ್ರತಾ ಪಡೆಗಳು ಬಂಧಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿರುವ ಸೋಪೋರ್ ಪೊಲೀಸರು ಫಿರ್ದೌಸ್ ಅಹ್ಮದ್ ಎಂಬಾತನ ಬಂಧನ ಮಾಡಿದ್ದಾರೆ. ಈತನಿಂದ AK 56 ರೈಫಲ್, ಮ್ಯಾಗಜೀನ್ ಮತ್ತು 30 ಜೀವಂತ ಗುಂಡು ವಶಕ್ಕೆ ಪಡೆದುಕೊಳ್ಳಲಾಗಿದೆ.
ಬಂಧಿತ ವ್ಯಕ್ತಿ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆ ಮತ್ತು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
1999ರಲ್ಲಿ ಏರ್ ಇಂಡಿಯಾದ ಐಸಿ 814 ವಿಮಾನ ಹೈಜಾಕ್ ಮಾಡಿದ್ದ ಉಗ್ರರಲ್ಲಿ ಓರ್ವ ಝಹೂರ್ ಮಿಸ್ತ್ರಿ ಪಾಕಿಸ್ತಾನದಲ್ಲಿ ಸಾವಿಗೀಡಾಗಿದ್ದಾನೆ ಎಂದು ತಿಳಿದು ಬಂದಿದೆ. ಆತನ ನಿವಾಸದ ಮೇಲೆ ದಾಳಿ ಮಾಡಿರುವ ದಾಳಿಕೋರರು ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ.








