ಶ್ರೀನಗರದಲ್ಲಿ ಗ್ರೆನೇಡ್ ದಾಳಿ – ನಾಲ್ವರಿಗೆ ಗಾಯ
ಗಣರಾಜ್ಯೋತ್ಸವದ ಒಂದು ದಿನ ಮುಂಚಿನ ದಿನ ಜಮ್ಮು ಕಾಶ್ಮೀರದ ಹರಿಸಿಂಗ್ ಹೈ ಸ್ಟ್ರೀಟ್ ಪ್ರದೇಶದಲ್ಲಿ ಮಂಗಳವಾರ ಉಗ್ರರು, ಭದ್ರತಾ ಸಿಬ್ಬಂದಿಯ ಮೇಲೆ ಗ್ರೆನೇಡ್ ದಾಳಿ ಮಾಡಿದ್ದಾರೆ. ಇದರ ಪರಿಣಾಮವಾಗಿ ಪೊಲೀಸ್ ಅಧಿಕಾರಿ ಮತ್ತು ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಧ್ಯಾಹ್ನ 3:30 ರ ಸುಮಾರಿಗೆ ಹರಿ ಸಿಂಗ್ ಹೈ ಸ್ಟ್ರೀಟ್‌ನಲ್ಲಿ ಭದ್ರತಾ ಸಿಬ್ಬಂದಿಯ ತಂಡದ ಕಡೆಗೆ ಗ್ರೆನೇಡ್ ದಾಳಿ ನಡೆದಿದೆ. ಗ್ರೆನೇಡ್ ರಸ್ತೆಯ ಪಕ್ಕದಲ್ಲಿ ಸ್ಫೋಟಿಸಿದೆ. ಸ್ಫೋಟದಲ್ಲಿ ನಾಲ್ವರು ಗಾಯಗೊಂಡಿದ್ದಾರೆ ಎಸಿಬಿ ಪೊಲೀಸ್ ಇನ್ಸ್‌ಪೆಕ್ಟರ್ ತನ್ವೀರ್ ಹುಸೇನ್, ಮೊಹಮ್ಮದ್ ಶಫಿ, ಅವರ ಪತ್ನಿ ತನ್ವೀರಾ ಮತ್ತು ಇನ್ನೊಬ್ಬ ಮಹಿಳೆ ಅಸ್ಮತ್ ಎಂದು ಗುರುತಿಸಲಾಗಿದೆ. J&K: Terrorists launch grenade attack in Srinagar, 4 injured
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರೆದಿವೆ ಮತ್ತು ಉಗ್ರರನ್ನು ಹೊಡೆದುರುಳಿಸಲು ಹುಡುಕಾಟವನ್ನು ಪ್ರಾರಂಭಿಸಿವೆ. ಗಣರಾಜ್ಯೋತ್ಸವವನ್ನು ಸುಗಮವಾಗಿ ಆಚರಿಸಲು ನಗರ ಮತ್ತು ಕಣಿವೆ ರಾಜ್ಯಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.