ಬೆಂಗಳೂರು: ಕೊರೊನಾ ವೈರಸ್‌ನ (Ciorona Virus) ಹೊಸ ರೂಪಾಂತರ ತಳಿ ರಾಜ್ಯಕ್ಕೂ ಕಾಲಿಟ್ಟಿದ್ದು, ಜೆ.ಎನ್ 1 (JN.1) ಶಾಕ್ ಎದುರಾಗಿದೆ.
ಸದ್ಯ ಈ ವೈರಸ್ ಮೈಸೂರಿನ 8 ಜನರಲ್ಲಿ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಹೊಸ ಸೋಂಕು ಸ್ಪೋಟದಿಂದ ರಾಜ್ಯದ ಜನರಲ್ಲಿ ಆತಂಕ ಶುರುವಾಗಿದೆ. ಸದ್ಯ 8 ಮಂದಿಯ ಸೋಂಕಿತರ ಸಂಪರ್ಕಿತರ ಮಾಹಿತಿ ಕಲೆ ಹಾಕಲಾಗುತ್ತಿದೆ.
ಇದು ಬಿಎ.2.86 ಓಮಿಕ್ರಾನ್‌ನ ಒಂದು ಉಪತಳಿ. ಬಿಎ.2.86 ಹಾಗೂ ಜೆಎನ್.1 ಉಪತಳಿಗಳ ನಡುವೆ ಅಷ್ಟೇನು ವ್ಯತ್ಯಾಸವಿಲ್ಲ ಎನ್ನಲಾಗಿದ್ದು, ಸೋಂಕಿನ ಮುಳ್ಳು ಚಾಚಿಕೆಗಳಲ್ಲಿ ಸಣ್ಣದೊಂದು ಬದಲಾವಣೆ ಇದೆಯಷ್ಟೇ. ಹೊಸ ಉಪತಳಿ ಜೆಎನ್.1 ಬಹು ವೇಗವಾಗಿ ಹರಡುತ್ತದೆ. ಅಪಾಯಕಾರಿ ಅಲ್ಲದಿದ್ದರೂ ಎಚ್ಚರಿಕೆ ವಹಿಸುವಂತೆ ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.