ಉಕ್ರೇನ್ ಗೆ ಶಸ್ತ್ರಾಸ್ತ್ರಗಳನ್ನು ನೀಡಲು ಮುಂದಾದ ಜೋ ಬೈಡನ್ – Saaksha Tv
ವಾಷಿಂಗ್ಟನ್: ರಷ್ಯಾ ಉಕ್ರೇನ್ ಯುದ್ಧದ ನೆಡೆಯುತ್ತಿದ್ದು, ಉಕ್ರೇನ್‍ಗೆ ಆಯುಧಗಳು, ಆಹಾರ ಮತ್ತು ಹಣದ ರೂಪದಲ್ಲಿ ಬೆಂಬಲ ನೀಡುವುದಾಗಿ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು ರಷ್ಯಾವನ್ನು ಎದುರಿಸಲು ಉಕ್ರೇನ್‍ನ ಬಳಿ ಸಾಕಷ್ಟು ಶಸ್ತ್ರಗಳಿವೆಯೇ ಎಂಬುದನ್ನು ನಾವು ಖಚಿತ ಪಡಿಸಿಕೊಳ್ಳುತ್ತಿದ್ದೇವೆ. ಜೊತೆಗೆ ಅಲ್ಲಿನ ನಾಗರಿಕರ ಜೀವವನ್ನು ಉಳಿಸಲು ಹಣ ಮತ್ತು ಆಹಾರವನ್ನು ಕಳಿಸುತ್ತೇವೆ. ಅಲ್ಲದೆ ಉಕ್ರೇನ್‍ನ ನಿರಾಶ್ರಿತರನ್ನು ನಾವು ಮುಕ್ತವಾಗಿ ಸ್ವಾಗತಿಸುತ್ತೇವೆ ಎಂದು ತಿಳಿಸಿದ್ದಾರೆ.
ಅಲ್ಲದೆ ಉಕ್ರೇನಿನ ಜನರು ಯುದ್ಧದಿಂದ ಹಾನಿಯಾದ ಪ್ರದೇಶಗಳನ್ನು ತೊರೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಿರಾಶ್ರಿತರನ್ನು ನಾವು ಸ್ವಾಗತಿಸಲು ಸಿದ್ಧರಿದ್ದೇವೆ ಎಂದು ಭರವಸೆ ನೀಡಿದರು.
ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸಿದ್ದರಿಂದ ಅಮೆರಿಕ ಮತ್ತು ಯುರೋಪಿಯನ್ ಮಿತ್ರರಾಷ್ಟ್ರಗಳು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸೇರಿದಂತೆ ರಷ್ಯಾದ ಉನ್ನತ ಶ್ರೇಣಿಯ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ರಷ್ಯಾದ ಹಲವಾರು ಪ್ರಮುಖ ಬ್ಯಾಂಕ್‍ಗಳ ಮೇಲೆ ನಿಬರ್ಂಧ ಹೇರಿದೆ. ಜೊತೆಗೆ ರಷ್ಯಾವನ್ನು SWIFTಹಣಕಾಸು ವ್ಯವಸ್ಥೆಯಿಂದ ಹೊರಹಾಕಿದೆ.