ನಿರ್ದೇಶಕ ಹಾಗೂ ನಿರ್ಮಾಪಕ ಜೋಗಿ ಪ್ರೇಮ್ ಅವರ ತಾಯಿ ನಿಧನರಾಗಿದ್ದಾರೆ. ಲ್ಯುಕೇಮಿಯಾ ಕ್ಯಾನ್ಸರ್ ನಿಂದ ಬಳಲುತ್ತಿದ್ದ ೭೫ ವರ್ಷದ ಭಾಗ್ಯಮ್ಮ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ಜಯನಗರದಲ್ಲಿನ ಶಾಂತಿ ಆಸ್ಪತ್ರೆಯಲ್ಲಿ ಬಾಗ್ಯಮ್ಮ ಚಿಕಿತ್ಸೆ ಪಡೆಯುತ್ತಿದ್ದರು. ಇನ್ನೂ ಭಾಗ್ಯಮ್ಮ ಅವರಿಗೆ ಕೊರೊನಾ ಟೆಸ್ಟ್ ಸಹ ಮಾಡಿಸಲಾಗಿದ್ದು, ರಿಪೋರ್ಟ್ ನೆಗೆಟಿವ್ ಬಂದಿದೆ. ಮಂಡ್ಯದ ಬೆಸಗರಹಳ್ಳಿಯಲ್ಲಿನ ಫಾರ್ಮ್ ಹೌಸ್‌ನಲ್ಲಿ ಭಾಗ್ಯಮ್ಮ ಅವರ ಅಂತ್ಯ ಕ್ರಿಯೆ ನೆರವೇರಲಿದೆ. ಬಾಗ್ಯಮ್ಮ ಅವರ ನಿಧನದದ ಸುದ್ದಿಯನ್ನು ಪ್ರೇಮ್ ರ ಪತ್ನಿ ನಟಿ ರಕ್ಷಿತಾ ಅವರು ಫೇಸ್ ಬುಕ್ ನಲ್ಲಿ ತಿಳಿಸಿದ್ದಾರೆ.
ಜಲಾಶಯದಿಂದ ನೀರು ಸೋರಿಕೆ: ರೈತರಲ್ಲಿ ಭಯದ ವಾತಾವರಣ
ಮಹಾರಾಷ್ಟ್ರದ ಕಾಳಮ್ಮವಾಡಿ ಜಲಾಶಯದಲ್ಲಿ ಗಂಭೀರ ಪರಿಸ್ಥಿತಿ ಉದ್ಭವಿಸಿದ್ದು, ಭಾರೀ ಪ್ರಮಾಣದ ನೀರು ಸೋರಿಕೆಯಾಗುತ್ತಿದೆ. ಈ ಸ್ಥಿತಿಯಿಂದ ಜಲಾಶಯದ ನೀರಿನ ಮೇಲೆ ಅವಲಂಬಿತರಾಗಿರುವ ರೈತರಲ್ಲಿ ಭಾರೀ ಆತಂಕ ಉಂಟಾಗಿದೆ....