ಹೊಸಕೋಟೆ : ಶಾಶ್ವತವಾಗಿ ಸ್ವತಂತ್ರ ಅಭ್ಯರ್ಥಿಯಾಗಿ ಇರುವುದು ಕಷ್ಟ. ಮುಂದಿನ ದಿನಗಳಲ್ಲಿ ನೂರಕ್ಕೆ ನೂರು ರಾಷ್ಟ್ರೀಯ ಪಕ್ಷಕ್ಕೆ ಸೇರೋದು ಸತ್ಯ ಎಂದು ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ (Sharath Bachegowda) ತಿಳಿಸಿದ್ದಾರೆ.
ಹೊಸಕೋಟೆ ಪಟ್ಟಣದ ಗೌತಮ್ ಕಾಲೋನಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ತೋಷಿಮಾ ಪಂಪ್ ಪ್ರೈವೇಟ್ ಕಂಪನಿಯಿಂದ 25 ಲಕ್ಷ ರೂ. ವೆಚ್ಚದ ಶಾಲೆ ಮತ್ತು ಅಂಗನವಾಡಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕರು, ರಾಷ್ಟ್ರೀಯ ಪಕ್ಷ ಸೇರುವುದರಲ್ಲಿ ಯಾವುದೇ ಗೊಂದಲವಿಲ್ಲ.
ನಮ್ಮ ತಾಲೂಕಿನ ಅಭಿವೃದ್ಧಿ ಮತ್ತು ಕಾರ್ಯಕರ್ತರ ಹಿತ ದೃಷ್ಟಿಯಿಂದ ನಾನು ಏನೇ ತೀರ್ಮಾನ ತೆಗೆದುಕೊಂಡರೂ ಒಳಿತಿಗೆ ಆಗಿರುತ್ತದೆ. ಶಾಶ್ವತವಾಗಿ ಸ್ವತಂತ್ರ ಅಭ್ಯರ್ಥಿಯಾಗಿ ಇರುವುದು ಕಷ್ಟ.
ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಪಕ್ಷ ಸೇರುವುದು ನೂರಕ್ಕೆ ನೂರು ಸತ್ಯ. ಆದ್ರೆ ಇಲ್ಲಿಯವರೆಗೂ ನನಗೆ ಯಾವುದೇ ಪಕ್ಷಗಳಿಂದ ಅಧಿಕೃತ ಆಹ್ವಾನ ಬಂದಿಲ್ಲ.
ಹಾಗೆಯೇ ಮುಂದಿನ ದಿನಗಳಲ್ಲಿ ಗ್ರಾಮ, ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳು ಬರುತ್ತಿದ್ದು, ಮಾತುಕತೆ ನಡೆಯುತ್ತಿರುವುದು ಸತ್ಯ ಎಂದರು.
ಇದನ್ನೂ ಓದಿ : ಬಿಹಾರ ಚುನಾವಣಾ ಅಖಾಡಕ್ಕೆ ನಾಳೆ ನಮೋ ಎಂಟ್ರಿ
ಇನ್ನು ನನಗೆ ತಾಲೂಕಿನ ಅಭಿವೃದ್ಧಿಯೇ ಮುಖ್ಯವಾಗಿದೆ. ಹಾಗಾಗಿ ಇದೇ 25 ರಂದು ಕಾಂಗ್ರೆಸ್ ಸೇರ್ಪಡೆ ಅನ್ನುವ ವಿಚಾರ ಸತ್ಯಕ್ಕೆ ದೂರವಾಗಿದೆ.
ನಾನು ನಮ್ಮ ಕಾರ್ಯಕರ್ತರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇನೆ.
ಕಾಂಗ್ರೆಸ್ ಪಕ್ಷವು ಈಗಾಗಲೇ ತಾಲೂಕಿನಲ್ಲಿ ಹೋಬಳಿಗಳ ಮಟ್ಟದ ಸಭೆಗಳನ್ನು ನಡೆಸುತ್ತಿದ್ದು, ಅಲ್ಲಿಯೂ ಸಹ ಯಾವುದೇ ಭಿನ್ನಾಭಿಪ್ರಾಯವಿಲ್ಲ.
ಮುಂದಿನ ದಿನಗಳಲ್ಲಿ ನಿಮಗೆ ಗೊತ್ತಾಗಲಿದೆ ಎಂದು ಶರತ್ ಬಚ್ಚೇಗೌಡ ತಿಳಿಸಿದ್ದಾರೆ.
ಅಂದಹಾಗೆ ಶರತ್ ಬಚ್ಚೇಗೌಡ ಅ. 25ರಂದು ಕಾಂಗ್ರೆಸ್ ಸೇರ್ಪಡೆಯಾಗುವ ಕಾರ್ಯಕ್ರಮಕ್ಕೆ ತಯಾರಿ ನಡೆದಿತ್ತು.
ಹೊಸಕೋಟೆಯಲ್ಲಿ ಬೃಹತ್ ಸಮಾವೇಶ ನಡೆಸಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾಹಿತಿ ಇತ್ತು. ಆದರೆ, ಉಪ ಚುನಾವಣೆ ಹಿನ್ನೆಲೆಯಲ್ಲಿ ಬೃಹತ್ ಸಮಾವೇಶಕ್ಕೆ ಅಡ್ಡಿಯಾಗಿದೆ.
ಇದನ್ನೂ ಓದಿ : ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಒಬ್ಬ ಕಾಡು ಮನುಷ್ಯ, ಪೋಕರಿ : ಸಿದ್ದರಾಮಯ್ಯ
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel