ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರು ಪ್ರತಿಭಟನಾಕಾರರ ವಿರುದ್ಧ ಪೊಲೀಸರು ಕೈಗೊಂಡ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.
ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಚಳವಳಿ ಹಾಗೂ ಪ್ರತಿಭಟನೆಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಬಂಧನ ಸೇರಿದಂತೆ ಪೊಲೀಸ್ ಕ್ರಮಗಳನ್ನು ಎದುರಿಸಲು ಸಿದ್ಧರಿರಬೇಕು ಎಂದು ಹೇಳಿದ್ದಾರೆ.
ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವುದು ಪೊಲೀಸರ ಪ್ರಮುಖ ಕರ್ತವ್ಯವಾಗಿದೆ ಎಂದು ಅವರು ತಿಳಿಸಿದರು.
ಇತ್ತೀಚೆಗೆ ನಡೆದ ‘ಸಂಸದ್ ಚಲೋ’ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರರ ಮೇಲೆ ಪೊಲೀಸರು ಬಲಪ್ರಯೋಗ ನಡೆಸಿದ ಘಟನೆ ಕುರಿತು ಪ್ರತಿಕ್ರಿಯಿಸಿದ ನಡ್ಡಾ, ಪೊಲೀಸ್ ಕ್ರಮವು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದಲೇ ಕೈಗೊಳ್ಳಲಾಗಿದೆ ಎಂದು ಸಮರ್ಥಿಸಿಕೊಂಡರು.








