NTR | ಅಭಿಮಾನಿಗಳಿಗೆ ಕ್ಷಮೆ ಕೇಳಿದ ಜ್ಯೂ.ಎನ್ ಟಿಆರ್
ಯಂಗ್ ಟೈಗರ್ ಎನ್ಟಿಆರ್ ತಮ್ಮ ಹುಟ್ಟುಹಬ್ಬದಂದು ಮನೆ ಬಳಿಗೆ ಬಂದಿದ್ದ ಅಭಿಮಾನಿಗಳನ್ನು ಭೇಟಿಯಾಗಲು ಸಾಧ್ಯವಾಗದ ಕಾರಣ ಕ್ಷಮೆಯಾಚಿಸಿದ್ದಾರೆ.
ನನ್ನ ಹುಟ್ಟು ಹಬ್ಬ ದಿನದಂದು ನಾನು ಮನೆಯಲ್ಲಿ ಇರಲಿಲ್ಲ. ಹೀಗಾಗಿ ನಾನು ನಿಮ್ಮನ್ನು ಬೇಟಿಯಾಗಲು ಸಾಧ್ಯವಾಗಲಿಲ್ಲ ಎಂದು ಕ್ಷಮೆ ಕೇಳಿದ್ದಾರೆ.
ಇದಕ್ಕೆ ಸಂಬಂಧಿಸಿದಂತೆ ಪತ್ರವೊಂದು ಸೋಶಿಯಲ್ ಮೀಡಿಯಾಲದಲ್ಲಿ ವೈರಲ್ ಆಗುತ್ತಿದೆ.
ನನ್ನ ಜನ್ಮದಿನದ ಶುಭಾಶಯಗಳನ್ನು ಕೋರಿದ ಸ್ನೇಹಿತರು, ಕುಟುಂಬ ಮತ್ತು ಪರಿಚಯಸ್ಥರಿಗೆ ಧನ್ಯವಾದಗಳು.
ದೂರದಿಂದ ನಮ್ಮ ಮನೆಗೆ ಬಂದು ವಿಶ್ ಹೇಳಲು ಬಂದ ಅಭಿಮಾನಿಗಳಿಗೆ ಧನ್ಯವಾದಗಳು. ನಿಮ್ಮ ಋಣವನ್ನು ಎಂದಿಗೂ ತೀರಿಸಲಾಗುವುದಿಲ್ಲ.
ನಿಮ್ಮನ್ನು ಭೇಟಿಯಾಗಲು ಸಾಧ್ಯವಾಗದಿದ್ದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ. ನೀವು ತೋರುವ ಪ್ರೀತಿಗೆ ನಾನು ಸದಾ ಚಿರಋಣಿಯಾಗಿರುತ್ತೇನೆ.
ನಿಮ್ಮ ಋಣವನ್ನು ನಾನು ಎಂದಿಗೂ ತೀರಿಸಲಾಗುವುದಿಲ್ಲ ಎಂದು ಟ್ವಿಟರ್‌ನಲ್ಲಿ ಭಾವನಾತ್ಮಕ ಪತ್ರವನ್ನು ಪೋಸ್ಟ್ ಮಾಡಿದ್ದಾರೆ.
ತಮ್ಮ ನೆಚ್ಚಿನ ನಾಯಕನಿಗೆ ಹುಟ್ಟುಹಬ್ಬದ ಶುಭಾಶಯ ಕೋರಲು ಬಂದಿದ್ದ ಎನ್ ಟಿಆರ್ ಅಭಿಮಾನಿಗಳ ಮೇಲೆ ಹೈದರಾಬಾದ್ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರು.
Jr NTR says sorry to fans