ಬಾಲಿವುಡ್ ಅಂಗಳದಲ್ಲಿ ಸೊಂಟ ಬಳುಕಿಸುತ್ತ ಸಾಕಷ್ಟು ಹೆಸರು ಮಾಡಿರುವ ನಟಿ ಜಾನ್ವಿ ಕಪೂರ್ ದಕ್ಷಿಣ ಭಾರತದ ಸಿನಿಮಾಗಳತ್ತ ಮುಖ ಮಾಡಿದ್ದಾರೆ.
ಈಗ ಟಾಲಿವುಡ್ ನ ‘ದೇವರ: ಪಾರ್ಟ್ 1’ ಸಿನಿಮಾಗೆ ಜಾನ್ವಿ ಕಪೂರ್ ನಾಯಕಿ ಆಗಿದ್ದಾರೆ. ಜೂನಿಯರ್ ಎನ್ಟಿಆರ್ ಮತ್ತು ಜಾನ್ವಿ ಚಿತ್ರದಲ್ಲಿ ನಟಿಸಿದ್ದಾರೆ. ಅವರಿಬ್ಬರ ಕಾಂಬಿನೇಷನ್ ಕುರಿತು ಈಗ ಚರ್ಚೆ ಶುರುವಾಗಿದೆ. ಇಬ್ಬರ ವಯಸ್ಸಿನ ಅಂತರದ ಬಗ್ಗೆ ನೆಟ್ಟಿಗರು ನೆಗೆಟಿವ್ ಕಮೆಂಟ್ ಮಾಡುತ್ತಿದ್ದಾರೆ.
ದೇವರ: ಪಾರ್ಟ್ 1’ ಸಿನಿಮಾದಿಂದ ಹೊಸ ಹಾಡು ಬಿಡುಗಡೆ ಮಾಡಲಾಗಿದೆ. ಈ ಹಾಡಿನಲ್ಲಿ ಜೂನಿಯರ್ ಎನ್ಟಿಆರ್ ಮತ್ತು ಜಾನ್ವಿ ಕಪೂರ್ ರೊಮ್ಯಾಂಟಿಕ್ ಆಗಿ ಕಾಣಿಸಿಕೊಂಡಿದ್ದಾರೆ. ಅಭಿಮಾನಿಗಳು ಈ ಹಾಡನ್ನು ಹಾಗೂ ಇಬ್ಬರ ಕೆಮಿಸ್ಟ್ರಿಗೆ ತುಂಬಾ ಇಷ್ಟ ಪಟ್ಟಿದ್ದಾರೆ. ಆದರೆ, ಹಲವರು ಮಾತ್ರ ತಕರಾರು ತೆಗೆದಿದ್ದಾರೆ.
ಜೂನಿಯರ್ ಎನ್ಟಿಆರ್ ಗೆ ಈಗ 41 ವರ್ಷ ವಯಸ್ಸು. ಜೋಡಿಯಾಗಿ 27ರ ಪ್ರಾಯದ ಜಾನ್ವಿ ಕಪೂರ್ ನಟಿಸಿದ್ದಾರೆ. ಇಬ್ಬರ ನಡುವೆ ಬರೋಬ್ಬರಿ 14 ವರ್ಷಗಳ ವಯಸ್ಸಿನ ಅಂತರ ಇದೆ. ಹೊಸ ಹಾಡಿನಲ್ಲಿ ಈ ಜೋಡಿ ರೊಮ್ಯಾಂಟಿಕ್ ಆಗಿ ಡ್ಯಾನ್ಸ್ ಮಾಡಿದೆ. ವಯಸ್ಸಿನ ಅಂತರದ ಕಾರಣದಿಂದ ಜಾನ್ವಿ ಕಪೂರ್ ಮತ್ತು ಜೂನಿಯರ್ ಎನ್ಟಿಆರ್ ಕೆಮಿಸ್ಟ್ರಿ ಚೆನ್ನಾಗಿ ಕಾಣುತ್ತಿಲ್ಲ ಎಂದು ಕೂಡ ಹಲವರು ಅಭಿಪ್ರಾಯ ಪಟ್ಟಿದ್ದಾರೆ.
ಜೂನಿಯರ್ ಎನ್ಟಿಆರ್ ಅವರು ಅತ್ಯುತ್ತಮ ಡ್ಯಾನ್ಸರ್ ಎಂಬುದರಲ್ಲಿ ಅನುಮಾನವೇ ಇಲ್ಲ. ‘ಆರ್ಆರ್ಆರ್’ ಸಿನಿಮಾದ ‘ನಾಟು ನಾಟು..’ ಹಾಡಿನಲ್ಲಿ ಅವರು ಸೂಪರ್ ಆಗಿ ಡ್ಯಾನ್ಸ್ ಮಾಡಿದ್ದಾರೆ. ಈಗ ‘ದೇವರ: ಪಾರ್ಟ್ 1’ ಸಿನಿಮಾದ ರೊಮ್ಯಾಂಟಿಕ್ ಹಾಡಿನಲ್ಲಿ ಅವರ ಡ್ಯಾನ್ಸ್ ಸ್ಟೆಪ್ಸ್ ನೋಡಿದ ಹಲವರಿಗೆ ಇಷ್ಟವಾಗಿಲ್ಲ ಎನ್ನಲಾಗುತ್ತಿದೆ.