ಮೈಸೂರು : ಜುಬಿಲೆಂಟ್ ಕಾರ್ಖಾನೆಯಿಂದ ಕೊರೊನಾ ಹೆಚ್ಚು ಹರಡಿದೆ. ಈ ಹಿನ್ನೆಲೆಯಲ್ಲಿ ಜುಬಿಲೆಂಟ್ ಕಾರ್ಖಾನೆ ನಿಯಮ ಉಲ್ಲಂಘನೆ ಮಾಡಿದೆ ಎಂಬ ಆರೋಪ ಕೇಳಿ ಬಂದಿದೆ. ಈ ವಿಚಾರಕ್ಕೆ ಸಂಸದ ವಿ. ಶ್ರೀನಿವಾಸ ಪ್ರಸಾದ್ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಬಿಲೆಂಟ್ ಕಾರ್ಖಾನೆ ಮೇಲೆ ತನಿಖೆ ಅನಾವಶ್ಯಕವಾಗಿದೆ. ಕಾರ್ಖಾನೆಯಿಂದ ಯಾವುದೇ ನಿಯಮ ಉಲ್ಲಂಘನೆಯಾಗಿಲ್ಲ ಎಂಬುದು ಮೇಲ್ನೋಟಕ್ಕೆ ತಿಳಿದು ಬಂದಿದೆ.. ಸದ್ಯದ ಮಟ್ಟಿಗೆ ಯಾವುದೇ ತನಿಖೆಯ ಅವಶ್ಯಕತೆ ಇಲ್ಲ.. ತನಿಖೆಗೆ ಐಎಎಸ್ ಅಧಿಕಾರಿ ಹರ್ಷಗುಪ್ತ ಅವರನ್ನ ನೇಮಿಸಲಾಗಿತ್ತು. ಕೊರೊನಾ ಹರಡಿದರ ಬಗ್ಗೆ ಸರಿಯಾದ ಮಾಹಿತಿ ಸಿಗುತ್ತಿಲ್ಲ ಅಂತ ಅವರೇ ಹೇಳಿದ್ದಾರೆ.ಹಾಗಾಗಿ ಜುಬಿಲೆಂಟ್ ಕೋವಿಡ್ ಸೋಂಕಿನ ಬಗ್ಗೆ ತಲೆಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ.. 50 ಸಾವಿರ ಕಿಟ್, 10 ಹತ್ತು ಗ್ರಾಮ ದತ್ತು ತೆಗೆದುಕೊಳ್ಳುವ ಬಗ್ಗೆ ಜುಬಿಲೆಂಟ್ ತಿಳಿಸಿದೆ.. ನಮಗೆ ಜನರ ಹಿತಾಸಕ್ತಿ ಮುಖ್ಯವೇ ಹೊರೆತು ಕಾರ್ಖಾನೆಯದ್ದಲ್ಲ ಎಂದು ಹೇಳಿದ್ದಾರೆ
ರಾಹುಲ್ ಪ್ರಧಾನಿ ಅಭ್ಯರ್ಥಿಯಾಗದಿದ್ದರೆ ಮೈತ್ರಿ ಕಟ್:ಮೈತ್ರಿಗೆ ಕುತ್ತು ತರುತ್ತಾ ಪ್ರಧಾನಿ ಪಟ್ಟ? ವಿಜಯ್ ಕ್ಯಾಬಿನೆಟ್ಗೆ ಕೈಕೊಡಲು ಸಿದ್ಧವಾಯ್ತಾ ಕಾಂಗ್ರೆಸ್?
ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಈಗ 2029ರ ಲೋಕಸಭಾ ಚುನಾವಣೆಯ ಪ್ರಧಾನಿ ಅಭ್ಯರ್ಥಿ ವಿಚಾರವಾಗಿ ದೊಡ್ಡ ಮಟ್ಟದ ಸಂಘರ್ಷ ಶುರುವಾಗಿದೆ. ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮತ್ತು...








