ಉಡುಪಿ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಚೌಗುಲೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಉಡುಪಿಯ ಸಂತೆಕಟ್ಟೆ ನೇಜಾರು (Nejaru Family) ನೂರ್ ಮೊಹಮ್ಮದ್ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿರುವ ಪ್ರಕರಣದ ತನಿಖೆಯನ್ನು ಈಗಾಗಲೇ ಪೊಲೀಸರು ಬಹುತೇಕವಾಗಿ ಮುಗಿಸಿದ್ದಾರೆ. ಪ್ರವೀಣ್ ಚೌಗುಲೆ ವಿಚಾರಣೆ ಬಹುತೇಕ ಪೂರ್ಣಗೊಂಡಿದ್ದು, ಕೋರ್ಟ್ ಗೆ ಆರೋಪಿಯನ್ನು ಪ್ರಧಾನ ಸಿವಿಲ್ ಮತ್ತು ಜೆಎಂಎಫ್ ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.
ಪ್ರಧಾನ ಸಿವಿಲ್ ನ್ಯಾಯಾಧೀಶರಾದ ದೀಪಾ ಮುಂದೆ ಮಲ್ಪೆ ಪೊಲೀಸರು ಹಾಜರು ಮಾಡಿದ್ದರು. ಆರೋಪಿಗೆ ಡಿ. 5 ರ ವರೆಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.