ನಾನು 5ಜಿ ವಿರೋಧಿ ಅಲ್ಲ ಅಂದ ಬಾಲಿವುಡ್ ನಟಿ ಜೂಹಿ ಚಾವ್ಲಾ..!

1 min read

ನಾನು 5ಜಿ ವಿರೋಧಿ ಅಲ್ಲ ಅಂದ ಬಾಲಿವುಡ್ ನಟಿ ಜೂಹಿ ಚಾವ್ಲಾ..!

ಮುಂಬೈ:  ಇತ್ತೀಚೆಗೆ ಬಾಲಿವುಡ್ ನಟಿ ಜೂಹಿ ಚಾವ್ಲಾ ಅವರು ಭಾರತದಲ್ಲಿ 5ಜಿ ನೆಟ್‍ವರ್ಕ್ ಸ್ಥಾಪನೆಯ ವಿರುದ್ಧ ಧ್ವನಿ ಎತ್ತಿದ್ದರೂ  ಪರಿಸರವಾದಿಯೂ ಆಗಿರುವ ಜೂಹಿ  ಈ ಸಂಬಂಧ ಕೋರ್ಟ್ ಮೊರೆ ಹೋಗಿದ್ದರು. ದೆಹಲಿ ಹೈಕೋರ್ಟ್ ಜೂಹಿ ಅವರು ಸಲ್ಲಿಸಿದ್ದ ಅರ್ಜಿಯನ್ನ ವಜಾಗೊಳಿಸಿತ್ತು. ಅಲ್ಲದೇ 20 ಲಕ್ಷ ರೂಪಾಯಿಗಳ ದಂಡವನ್ನೂ ವಿಧಿಸಿತ್ತು..

5ಜಿ ತಂತ್ರಜ್ಞಾನ ಜೀವ ಸಂಕುಲಕ್ಕೆ ಅಪಾಯ ತಂದೊಡ್ಡುತ್ತದೆ ಎಂದು ಆರೋಪಿಸಿ ದೆಹಲಿ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದ ಜೂಹಿ ಚಾವ್ಲಾ 5ಜಿ ತಂತ್ರಜ್ಞಾನ ಜಾರಿಗೆ ತಡೆ ನೀಡಬೇಕು ಎಂದು ಕೋರಿದ್ದರು. ಆದರೆ ಜೂಹಿ ಚಾವ್ಲಾ ಅವರ ಈ ಅರ್ಜಿಯನ್ನು ಪ್ರಚಾರಕ್ಕಾಗಿ ಅರ್ಜಿ ಸಲ್ಲಿಸಿದ್ದೀರಿ ಎಂದು ಕೋರ್ಟ್ ಅರ್ಜಿಯನ್ನು ವಜಾಗೊಳಿಸಿ 20 ಲಕ್ಷ ರೂ ದಂಡ ವಿಧಿಸಿತ್ತು. ಅದಲ್ಲದೇ ವೀಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ಅರ್ಜಿದಾರರ ವಿಚಾರಣೆ ನಡೆಸಿದ್ದು, ಈ ವಿಚಾರಣೆಯ ಲಿಂಕ್‍ನ್ನು ಜೂಹಿ ಚಾವ್ಲಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಇದರಿಂದಾಗಿ ಮೂರು ಬಾರಿ ವಿಚಾರಣೆಗೆ ಅಡ್ಡಿಯಾಗಿತ್ತು. ಅದಲ್ಲದೇ ಅಭಿಮಾಯೋರ್ವ ನಟಿಯ ಹಾಡು ಹಾಡಿ ವಿಚಾರಣೆಗೆ ಅಡ್ಡಿ ಪಡಿಸಿದ್ದು, ಆತನ ವಿರುದ್ಧವು ಕಾನೂನು ಕ್ರಮ ಕೈಗೊಳ್ಳುವಂತೆ ಕೋರ್ಟ್ ಸೂಚಿಸಿತ್ತು.

ಭಾರತದಲ್ಲಿ 5ಜಿಯನ್ನು ಜಾರಿಗೆ ತಂದರೆ ದೇಶದಲ್ಲಿರುವ ಯಾವುದೇ ವ್ಯಕ್ತಿ, ಪ್ರಾಣಿ, ಪಕ್ಷಿ, ಕೀಟ, ಸಸ್ಯ ಪ್ರಭೇದಗಳು 5ಜಿಯ ವಿಕಿರಣದಿಂದಾಗುವ ತೊಂದರೆಗಳನ್ನು ತಡೆದುಕೊಳ್ಳಲು ಸಾಧ್ಯವಿಲ್ಲ. ದಿನದ 24 ಗಂಟೆ, ವರ್ಷದ 365 ದಿನ, ಈಗಿರುವ ನೆಟ್‍ವರ್ಕ್ ವಿಕಿರಣಗಳಿಂದ ರೇಡಿಯೋ ಫ್ರಿಕ್ವೆನ್ಸಿ ವಿಕಿರಣ 10x ರಿಂದ 100x ಪಟ್ಟು ಹೆಚ್ಚಾಗಿರುತ್ತದೆ.

ಹಲವು ದುಷ್ಪರಿಣಾಮಗಳಿದ್ದು, ಮುಂದೆ ಬದಲಾಯಿಸಲು ಸಾಧ್ಯವಾಗದ ಪರಿಣಾಮವನ್ನು ಎದುರಿಸಬೇಕಾಗುತ್ತದೆ. ಮನುಷ್ಯರ ಮೇಲೆ ಮಾತ್ರವಲ್ಲದೇ ಭೂಮಿಯ ಮೇಲಿರುವ ಎಲ್ಲಾ ಪರಿಸರ ವ್ಯವಸ್ಥೆಗೆ ಇದರಿಂದ ತೊಂದರೆ ಎದುರಾಗುತ್ತದೆ ಎಂದು ಜೂಹಿ ದೂರಿನಲ್ಲಿ ಉಲ್ಲೇಖಿಸಿದ್ದರು.

5ಜಿಯಿಂದ ಮಾನವಕುಲದ, ಪುರುಷ, ಮಹಿಳೆ, ಮಗು, ವಯಸ್ಕ, ಶಿಶು, ಪ್ರಾಣಿ ಮತ್ತು ಎಲ್ಲಾ ವಿದಧ ಜೀವಿಗಳಿಗೂ ಇದರಿಂದ ಯಾವುದೇ ದುಷ್ಟರಿಣಾಮಗಳಿಲ್ಲ ಎಂದು ಪರೀಕ್ಷಿಸುವಂತೆ, ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ಕೊಡಬೇಕೆಂದು ವಕೀಲರಾದ ದೀಪಕ್ ಖೋಸ್ಲಾ ಅವರ ಮೂಲಕ ಸಲ್ಲಿಸಲಾಗಿರುವ ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಇದರ ಬೆನ್ನಲ್ಲೇ  ಈ ಕುರಿತು ಜೂಹಿ ಮಾತನಾಡಿದ್ದಾರೆ. ನಾನು 5ಜಿ ವಿರೋಧಿಯಲ್ಲ ಆದರೆ ಇದರಿಂದ ಆಗಬಹುದಾದ ಸಮಸ್ಯೆಗಳನ್ನು ತಡೆಯಬೇಕೆಂದು ಹೇಳಿಕೊಂಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾತನಾಡಿರುವ ಜೂಹಿ, ನಾನು 5ಜಿ ತಂತ್ರಜ್ಞಾನದ ವಿರೋಧಿಯಲ್ಲ. ಆದರೆ ಇದರಿಂದ ಆಗಬಹುದಾದ ಸಮಸ್ಯೆಗಳನ್ನು ತಡೆಯಬೇಕು. ಮತ್ತು ಪ್ರತಿಯೊಬ್ಬರಿಗೂ ಇದು ಸುರಕ್ಷಿತ ಎಂಬುದನ್ನು ಖಾತರಿಪಡಿಸಿಕೊಳ್ಳಬೇಕು. 5ಜಿ ವಿಕಿರಣದಿಂದ ಮನುಷ್ಯರ ಮೇಲೆ ಹಲವು ದುಷ್ಪರಿಣಾಮಗಳಿವೆ ಎಂದು ಹೇಳಿದ್ದಾರೆ.

ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd