ಮೈಸೂರು : ಹೆಮ್ಮಾರಿ ಕೊರೊನಾ ವೈರಸ್ ನಡುವೆ ವಿಶ್ವವಿಖ್ಯಾತ ಜಂಬೂಸವಾರಿ ಈ ಬಾರಿ ಸರಳವಾಗಿ ಆಚರಿಸಲಾಗುತ್ತಿದೆ. ಸಾಂಸ್ಕøತಿಕ ನಗರಿ ಮೈಸೂರಿನಲ್ಲಿ ಜಂಬೂ ಸವಾರಿಗೆ( Jumbo savari ) ಎಲ್ಲಾ ರೀತಿಯ ಸಿದ್ಧತೆಗಳು ಆರಂಭವಾಗಿವೆ.
ಮಧ್ಯಾಹ್ನ 2:59 ರಿಂದ 3:20 ರ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದ ಬಳಿ ನಂದಿ ಧ್ವಜಕ್ಕೆ ಸಾಂಪ್ರದಾಯಿಕ ಪೂಜೆ ಸಲ್ಲಿಸುವ ಮೂಲಕ ಸಿಎಂ ಬಿಎಸ್ ಯಡಿಯೂರಪ್ಪ ಜಂಬೂಸವಾರಿಗೆ ಚಾಲನೆ ನೀಡಲಿದ್ದಾರೆ.
ಆ ಬಳಿಕ ಮಧ್ಯಾಹ್ನ 3:40 ರಿಂದ 4:15 ರ ನಡುವೆ ಸಲ್ಲುವ ಶುಭ ಕುಂಭ ಲಗ್ನದಲ್ಲಿ ಮುಖ್ಯಮಂತ್ರಿ ಹಾಗೂ ಇತರ ಗಣ್ಯರಿಂದ ಪುಷ್ಪಾರ್ಚನೆ ಮಾಡಿ ಸರಳ ದಸರಾದ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.
ಇದನ್ನೂ ಓದಿ : ಮೈಸೂರು ದಸರಾ ಜಂಬೂ ಸವಾರಿಗೆ ಕೊಡಗಿನ ಗಜಪಡೆ ಸಜ್ಜು..!
ಮುಖ್ಯ ಅತಿಥಿಯಾಗಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪುಷ್ಪಾರ್ಚನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಇನ್ನು ಈ ಬಾರಿಯ ಜಂಬೂಸವಾರಿಯಲ್ಲಿ ನಾಲ್ಕು 4 ಕಲಾತಂಡಗಳು, ಅಶ್ವರೋಹಿ ದಳದ 2 ತುಕಡಿ, 1 ಸ್ತಬ್ಧ ಚಿತ್ರ, ಕರ್ನಾಟಕ ಪೊಲೀಸ್ ಬ್ಯಾಂಡ್ ಆನೆಗಾಡಿಯಲ್ಲಿ ಸಾಗಲಿವೆ.
ಅಭಿಮನ್ಯು ಆನೆಯೊಂದಿಗೆ ಕುಮ್ಕಿ ಆನೆಗಳಾಗಿ ವಿಜಯ ಮತ್ತು ಕಾವೇರಿ ಆನೆ ಚಿನ್ನದ ಅಂಬಾರಿ ಹೊತ್ತ ಅಭಿಮನ್ಯು ಆನೆ ಜೊತೆ ಸಾಗಲಿದೆ.
ಇದರ ಹಿಂದೆ ಅಶ್ವಾರೋಹಿ ದಳದ ಒಂದು ತುಕಡಿ, ಮೂರು ಫಿರಂಗಿ ಗಾಡಿ, ಅರಣ್ಯ ಇಲಾಖೆಯ ವೈದ್ಯರ ತಂಡ, ಆಂಬುಲೆನ್ಸ್ ಸಾಗಲಿದೆ.
30 ರಿಂದ 40 ನಿಮಿಷದಲ್ಲಿ ಜಂಬೂಸವಾರಿ ಮೆರವಣಿಗೆ ಮುಗಿಯಲಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel