ನವದೆಹಲಿ : ಕುಸ್ತಿ ಫೆಡರೇಶನ್ (WFI) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ವಿರುದ್ಧ ಲೈಂಗಿಕ ಕಿರುಕುಳ ಆರೋಪಿಸಿ ಮಹಿಳಾ ಕುಸ್ತಿ ಪಟುಗಳು ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸದ್ಯ ಅವರ ಪ್ರತಿಭಟನೆಗೆ ರೈತ ಸಂಘ ಬೆಂಬಲ ನೀಡಿದೆ. ಬಂಧನಕ್ಕೆ ಜೂನ್ 9ರ ಗಡುವು ನೀಡಲಾಗಿದೆ.
ಈ ಕುರಿತು ಮಾತನಾಡಿರುವ ರೈತ ನಾಯಕ ರಾಕೇಶ್ ಟಿಕಾಯತ್ (Rakesh Tikait), ಅಥ್ಲೀಟ್ (Wrestlers)ಗಳು ಬಿಜೆಪಿ ಸಂಸದನ ವಿರುದ್ಧ ಆರೋಪ ಮಾಡಿದ್ದಾರೆ. ಜೂನ್ 9ರೊಳಗಾಗಿ ಬ್ರಿಜ್ ಭೂಷಣ್ನನ್ನ ಬಂಧಿಸಬೇಕು. ಅಲ್ಲದೇ, ಕುಸ್ತಿಪಟುಗಳ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನ ಹಿಂಪಡೆಯಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಕುಸ್ತಿಪಟುಗಳ ಮನವೊಲಿಸುವ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರ ಪ್ರಯತ್ನವೂ ವಿಫಲವಾಗಿದೆ. ಅನುರಾಗ್ ಠಾಕೂರ್ ಕುಸ್ತಿಪಟುಗಳಿಗೆ ನ್ಯಾಯ ಒದಗಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಇದಕ್ಕೆ ಒಪ್ಪದ ಕುಸ್ತಿ ಪಟುಗಳು ಭೂಷಣ್ ಬಂಧನವಾಗಲೇಬೆಂಕುದ ಪಟ್ಟು ಹಿಡಿದಿದ್ದಾರೆ.