ನೂತನ ಉಪ ಲೋಕಾಯುಕ್ತರಾಗಿ ನೇಮಕರಾದ ನ್ಯಾಯಮೂರ್ತಿ ಫಣೀಂದ್ರ
ಬೆಂಗಳೂರು: ರಾಜ್ಯದ ನೂತನ ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಫಣೀಂದ್ರ ಪ್ರಮಾಣ ವಚನ ಸ್ವೀಕರಿಸಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನವನ್ನು ಬೋಧಿಸಿದರು.
2020ರ ಡಿಸೆಂಬರ್ 16ರಿಂದ ಈ ಹುದ್ದೆ ಕಾಲಿ ಇತ್ತು. ಈ ಮೊದಲು ನಿವೃತ್ತ ನ್ಯಾಯಮೂರ್ತಿ ಎನ್.ಆನಂದ್ ಉಪ ಲೋಕಾಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಮಾರ್ಚ್ 22ರಂದು ನ್ಯಾಯಮೂರ್ತಿ ಫಣೀಂದ್ರ ಅವರ ಹೆಸರನ್ನು ಉಪ ಲೋಕಾಯುಕ್ತ ಹುದ್ದೆಗೆ ನೇಮಕ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದರು. ಇಂದು ನ್ಯಾ. ಫಣೀಂದ್ರ ಅವರು ತಮ್ಮ ಅಧಿಕಾರ ಸ್ವೀಕರಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭೆ ಉಪ ಸಭಾಪತಿ ಆನಂದ್ ಮಾಮನಿ, ಗೃಹ ಸಚಿವ ಆರಗ ಜ್ಞಾನೆಂದ್ರ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್, ಶಾಸಕ ಸುರೇಶ್ ಕುಮಾರ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ ಸೂದ್, ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಮತ್ತು ಇತರರು ಭಾಗಿಯಾಗಿದ್ದರು.