ಮಧ್ಯಪ್ರದೇಶದ ಕ್ಷಿಪ್ರ ರಾಜಕೀಯ ಬೆಳವಣಿಗೆಯ ಮುಂದಾಳತ್ವ ವಹಿಸಿರುವ ಜ್ಯೋತಿರಾದಿತ್ಯ ಸಿಂಧಿಯಾ ಹಂದಿಜ್ವರದಿಂದ ಬಳಲುತ್ತಿರುವುದಾಗಿ ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
ಬೆಂಗಳೂರಿನ ಮಾರತಹಳ್ಳಿಯ ಖಾಸಗಿ ಹೋಟೆಲ್‍ನಲ್ಲಿ ವಾಸ್ತವ್ಯ ಹೂಡಿರುವ 6 ಸಚಿವರು ಮತ್ತು 12 ಕಾಂಗ್ರೆಸ್ ಶಾಸಕರು ಜ್ಯೋತಿರಾದಿತ್ಯ ಸಿಂಧಿಯಾ ಬೆಂಬಲಿಗರಾಗಿದ್ದು ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದ್ದರು.
ಕೆಲವು ಸಮಯದ ಹಿಂದೆ ಜ್ಯೋತಿರಾದಿತ್ಯ ತನ್ನ ಟ್ವಿಟರ್ ಖಾತೆಯಲ್ಲಿ ಕಾಂಗ್ರೆಸ್ ವಿರೋಧಿ ರಾಜಕೀಯ ನಿಲುವು ಹೊರ ಹಾಕಿ ಅಸಮಾಧಾನವನ್ನು ಹೊರಹಾಕಿದ್ದರು.
ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್
ಈ ಕುರಿತು ಮಾತನಾಡಿದ್ದು, ನಾವು ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದೇವೆ. ಆದರೆ ಅವರು ಹಂದಿ ಜ್ವರದಿಂದ ಬಳಲುತ್ತಿದ್ದಾರಂತೆ. ಹೀಗಾಗಿ ನಾವು ಅವರೊಂದಿಗೆ ಮಾತನಾಡಲು ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ.
ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಏರಿದ ಬಳಿಕ ಮುಖ್ಯಮಂತ್ರಿ ಪಟ್ಟದ ವಿಚಾರದಲ್ಲಿ ಕಮಲನಾಥ್ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ನಡುವೆ ಸ್ಪರ್ಧೆ ಏರ್ಪಟಿತ್ತು. ಕೊನೆಗೆ ಕಾಂಗ್ರೆಸ್ ಹೈಕಮಾಂಡ್ ಕಮಲನಾಥ್ ಅವರಿಗೆ ಮುಖ್ಯಮಂತ್ರಿ ಹುದ್ದೆಯನ್ನು ನೀಡಿತ್ತು.
https://twitter.com/ANI/status/1237098327159615488








