K. S. Eshwarappa | ರಾಷ್ಟ್ರಭಕ್ತ ಮುಸಲ್ಮಾನರು ಮಕ್ಳಳನ್ನ ನಿಯಂತ್ರಣದಲ್ಲಿಟ್ಟುಕೊಳ್ಳಬೇಕು
ಶಿವಮೊಗ್ಗ : ರಾಷ್ಟ್ರ ಭಕ್ತ ಮುಸಲ್ಮಾನರು ತಮ್ಮ ಮಕ್ಕಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು. ಇಲ್ಲದಿದ್ದಲ್ಲಿ ಅವರು ಕೊಲೆ ಮಾಡಲು ಹೋಗಿ ಜೈಲು ಸೇರುತ್ತಾರೆ, ಇಲ್ಲವೇ ಭಯೋತ್ಪಾದಕ ಸಂಘಟನೆ ಜೊತೆ ಸೇರಿ ಜೈಲು ಸೇರುತ್ತಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಎಸ್ ಡಿಪಿಐ, ಪಿಎಫ್ ಐ ರಾಷ್ಟ್ರದ್ರೋಹಿ ಸಂಘಟನೆಗಳು. ಮುಸ್ಲಿಂ ಯುವಕರನ್ನು ಇಸ್ಲಾಮಿಕ್ ಸ್ಟೇಟ್ಸ್ ಜೊತೆ ಸೇರಿಸುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಈ ಬಗ್ಗೆ ಮುಸ್ಲಿಂ ಸಮುದಾಯದ ಹಿರಿಯರು ಎಚ್ಚರಿಕೆ ವಹಿಸಬೇಕು ಎಂದರು.
ನಲಪಾಡ್ ಉದ್ಯೋಗವಿಲ್ಲದ ಕಾರಣದಿಂದ ಯುವಕರು ದುಷ್ಕೃತ್ಯಕ್ಕೆ ಇಳಿಯುತ್ತಿದ್ದಾರೆ ಎಂದಿದ್ದಾರೆ. ಕೇವಲ ಮುಸ್ಲಿಂ ಸಮುದಾಯದ ಯುವಕರು ಮಾತ್ರ ಇಂಥ ದುಷ್ಕೃತ್ಯದಲ್ಲಿ ತೊಡಗುತ್ತಾರೆ. ಬೇರೆ ಯಾವ ಯುವಕರು ಈ ರೀತಿಯ ಕೃತ್ಯಗಳಲ್ಲಿಭಾಗಿಯಾಗುವುದಿಲ್ಲ. ಈ ನಲಪಾಡ್ ಜೈಲಿಗೆ ಹೋಗಿಬಂದಿರುವ ವ್ಯಕ್ತಿ. ಈತ ಕಾಂಗ್ರೆಸ್ ನಾಯಕ. ಆತನನ್ನು ಕಾಂಗ್ರೆಸ್ ನಲ್ಲಿ ಇಟ್ಟುಕೊಳ್ಳುವ ಬಗ್ಗೆ ಕಾಂಗ್ರೆಸ್ ಇನ್ನೊಮ್ಮೆ ಆಲೋಚಿಸಬೇಕು. ಮುಸಲ್ಮಾನರ ಮನಸ್ಥಿತಿ ಬದಲಾಗಬೇಕು. ರಾಷ್ಟ್ರಭಕ್ತರಾಗಬೇಕು. ರಾಷ್ಟ್ರದ್ರೋಹಿಗಳಿಗೆ ಬುದ್ದಿಹೇಳುವ ಕೆಲಸವನ್ನು ಮುಸ್ಲಿಂ ಸಮುದಾಯದ ಹಿರಿಯರು ಮಾಡಬೇಕು ಎಂದು ಹೇಳಿದರು.
‘ಪೇ ಸಿಎಂ’ ಪೋಸ್ಟರ್ ಬಗ್ಗೆ ಮಾತನಾಡಿದ ಈಶ್ವರಪ್ಪ,ಇಷ್ಟು ನೀಚಮಟ್ಟದ ರಾಜಕಾರಣಕ್ಕೆ ಕಾಂಗ್ರೆಸ್ ಇಳಿಯುತ್ತದೆ ಎಂದು ಅಂದುಕೊಂಡಿರಲಿಲ್ಲ. ಒಬ್ಬ ಸಿಎಂ ಬಗ್ಗೆ ಪೆಸಿಎಂ ಎಂಬ ಅಭಿಯಾನ ಮಾಡುವ ಮೂಲಕ ನೀಚ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ಸಿಗರು ರಾಜಕಾರಣ ಮಾಡಲು ಯೋಗ್ಯರಲ್ಲ. ಪೆಸಿಎಂ ಪೋಸ್ಟರ್ ಹಂಚುವವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಕಾಂಗ್ರೆಸ್ಸಿಗರು ಹೇಳಬೇಕಿತ್ತು. ಆದರೆ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಅವರೇ ಪೆಸಿಎಂ ಪೋಸ್ಟರ್ ಹಂಚುವ ಮೂಲಕ ಯುವ ಕಾಂಗ್ರೆಸ್ ಗಿಂತಲೂ ಕೀಳು ಮಟ್ಟಕ್ಕೆ ಇಳಿದಿದ್ದಾರೆ. ಮುಖ್ಯಮಂತ್ರಿ ಪದವಿಗೆ ಕಾಂಗ್ರೆಸ್ಸಿಗರು ಅಪಮಾನ ಮಾಡುತಿದ್ದಾರೆ ಎಂದು ಈಶ್ವರಪ್ಪ ಟೀಕಿಸಿದರು.
ಕಾಂಗ್ರೆಸ್ ನ ಚೇಲ ಗುತ್ತಿಗೆದಾರರ ಸಂಘದ ಅಧ್ಯಕ್ಷ ಎಲ್ಲರಿಗೂ ದೂರು ನೀಡಿದ ಆದರೆ ಎಲ್ಲಿಯೂ ಸಾಬೀತಾಗಿಲ್ಲ. ಕಾಂಗ್ರೆಸ್ಸಿಗರು ಬುಡುಬುಡುಕೆ ಆಟ ನಿಲ್ಲಿಸಬೇಕು. ಖಾಲಿ ಡಬ್ಬ ಅಲ್ಲಾಡಿಸಿ ಶಬ್ಧ ಮಾಡುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅಥವಾ ಅವರ ಬಾಸ್ ಡಿಕೆಶಿ ಹಾಗೂ ಸಿದ್ದರಾಮಯ್ಯ ಅವರು ದಾಖಲೆ ಬಿಡುಗಡೆ ಮಾಡಲಿ. ಅದನ್ನು ಬಿಟ್ಟು ೪೦ ಪರ್ಸೆಂಟ್ ಎಂದು ಹೇಳಿಕೊಂಡು ಬರುವುದು ಸರಿಯಲ್ಲ. ವಿಧಾನ ಮಂಡಲದ ಅಧಿವೇಶನದಲ್ಲಿ ಈ ಬಗ್ಗೆ ಧ್ವನಿ ಎತ್ತಬೇಕಿತ್ತು ಎಂದರು.ಚುನಾವಣೆ ನಡೆದರೆ ಕಾಂಗ್ರೆಸ್ ಮತ ಬ್ಯಾಂಕ್ ನಲ್ಲಿ ಶೇ. ೪೦ ರಷ್ಟು ಮತಗಳು ಕಡಿಮೆಯಾಗಲಿವೆ ಎಂದರು.
ವಿಧಾನಸಭಾ ಅಭ್ಯರ್ಥಿಗಳ ಪಟ್ಟಿಯನ್ನು ನಾನೇ ತಯಾರಿಸುತ್ತೇನೆ. ಅದನ್ನು ಸಿದ್ದರಾಮಯ್ಯ ಅವರಿಗೂ ತೋರಿಸುವುದಿಲ್ಲ. ನೇರವಾಗಿ ಸೋನಿಯಾ ಗಾಂಧಿಗೆ ಕಳುಹಿಸುತ್ತೇನೆ ಎಂದು ಡಿ.ಕೆ.ಶಿವಕುಮಾರ್ ಹೇಳುತ್ತಿದ್ದಾರೆ. ಸರ್ವಾಧಿಕಾರಿ ಧೋರಣೆಯಿಂದ ಡಿ.ಕೆ.ಶಿವಕುಮಾರ್ ಮಾಡುತ್ತಿದ್ದಾರೆ. ಇದನ್ನು ಅವರ ಪಕ್ಷದ ಇನ್ನೊಂದು ಗುಂಪಿನವರೇ ವಿರೋಧಿಸುತಿದ್ದಾರೆ. ಆರ್.ವಿ.ದೇಶಪಾಂಡೆ, ದಿನೇಶ್ ಗುಂಡೂರಾವ್ ಅವರೇ ಈ ರೀತಿಯ ಸರ್ವಾಧಿಕಾರಿ ಧೋರಣೆ ಸರಿಯಲ್ಲ ಎಂದು ಹೇಳುತಿದ್ದಾರೆ. ಕಾಂಗ್ರೆಸ್ ಪಕ್ಷದ ವಿಭಜನೆಗೆ ಸಿದ್ದರಾಮೋತ್ಸವ ಕಾರಣವಾಗಿದೆ ಎಂದರು.